ವಿವೇಕಾನಂದರ ಆಶಯದಂತೆ ರಾಷ್ಟ್ರೀಯ ಶಿಕ್ಷಣ ನೀತಿ: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು,ಜ.12- ಯುವಜನರು ವಿವೇಕಾನಂದರಂತೆ ಬದ್ಧತೆಯಿಂದ ಕೆಲಸ ಮಾಡುವ ಸಂಸ್ಕøತಿಯನ್ನು ರೂಢಿಸಿಕೊಳ್ಳಬೇಕು. ಈ ಆಶಯದೊಂದಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೆಳಿದರು. ಸ್ವಾಮಿ ವಿವೇಕಾನಂದರ 160ನೇ ಜಯಂತಿ ಪ್ರಯುಕ್ತ ಯುವ ದಿನಾಚರಣೆ ನೆರವೇರಿತು. ಇದರ ಅಂಗವಾಗಿ ಸಚಿವರು ಯಶವಂತಪುರದ ಮೆಟ್ರೊ ಬಳಿ ಮತ್ತು 18ನೇ ಅಡ್ಡರಸ್ತೆಯ ಉದ್ಯಾನದಲ್ಲಿರುವ ವಿವೇಕಾನಂದರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು. ಜತೆಗೆ 18ನೇ ಅಡ್ಡರಸ್ತೆಯಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಯುವ ದಿನಾ ಚರಣೆಯಲ್ಲಿ […]