ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿಪರತೆಯೇ ಜರೂರು : ಅಶ್ವತ್ಥ್‍ನಾರಾಯಣ

ಬೆಂಗಳೂರು,ಜ.14- ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆ ತಂದರೆ ಉಳಿದ ಕ್ಷೇತ್ರಗಳು ತಮ್ಮಿಂದ ತಾವೇ ಸರಿ ಹೋಗುತ್ತವಲ್ಲದೆ, ಇಡೀ ದೇಶ ಅಭಿವೃದ್ಧಿ ಹೊಂದುತ್ತದೆ. ಆದ್ದರಿಂದ ಶಿಕ್ಷಣ ಕ್ಷೇತ್ರವು ಸಂಪೂರ್ಣ ವೃತ್ತಿಪರವಾಗಬೇಕಾಗಿದ್ದು, ತಂತ್ರಜ್ಞಾನ ಮತ್ತು ಅನ್ವೇಷಣೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಬೆಂಗಳೂರು ಉತ್ತರ ವಲಯವು ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸುಧಾರಣೆ ಕುರಿತ ಸಂವಾದ ಮತ್ತು ಸರಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರು […]