ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಮಿಠಾಯಿ

ಬೆಂಗಳೂರು,ಜ.23- ಸರ್ಕಾರಿ ಶಾಲೆಯ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದ್ದು, ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಚಿಕ್ಕಿ ನೀಡುವಂತೆ ಸೂಚಿಸಿದೆ. ಆದರೆ ಕೆಲವು ಶಾಲೆಗಳಲ್ಲಿ ಮಕ್ಕಳು ಮೊಟ್ಟೆ ಕೇಳಿದರೂ ಬಲವಂತವಾಗಿ ಬಾಳೆಹಣ್ಣು ಹಾಗೂ ಚಿಕ್ಕಿ ನೀಡುತ್ತಿರುವುದು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಆರ್ ವಿಶಾಲ್ ಅವರು ಈ ಆದೇಶ ನೀಡಿದ್ದು, ಮಧ್ಯಾಹ್ನ ಊಟದ ಕುರಿತು […]

ಮಹಾರಾಷ್ಟ್ರದಲ್ಲಿ ಮೊಟ್ಟೆಗಳ ಕೊರತೆ

ಔರಂಗಾಬಾದ್, ಜ.18- ದೇಶಾದ್ಯಂತ ಮೊಟ್ಟೆಯ ಬೆಲೆ ಏರಿಕೆಯಾಗಿರುವ ಬೆನ್ನಲ್ಲೆ ಮಹಾರಾಷ್ಟ್ರದಲ್ಲಿ ಒಂದು ಕೋಟಿ ಮೊಟ್ಟೆಗಳ ಕೊರತೆ ಎದುರಾಗಿದೆ ಎಂದು ಪಶುಸಂಗೋಪನಾ ಇಲಾಖೆ ತಿಳಿಸಿದೆ. ಮಹಾರಾಷ್ಟ್ರದಲ್ಲಿ ದಿನಕ್ಕೆ 2.25 ಕೋಟಿಗೂ ಹೆಚ್ಚು ಮೊಟ್ಟೆಗಳನ್ನು ಸೇವಿಸಲಾಗುತ್ತದೆ. ರಾಜ್ಯದಲ್ಲಿ ಪ್ರತಿದಿನ ಒಂದರಿಂದ ಒಂದುವರೆ ಕೋಟಿ ಮೊಟ್ಟೆಗಳನ್ನು ಉತ್ಪಾದಿಸಲಾಗುತ್ತದೆ. ಬಾಕಿ ಒಂದು ಕೋಟಿ ಮೊಟ್ಟೆಗಳ ಬೇಡಿಕೆ ಇದೆ. ಇದನ್ನು ಪೂರೈಸಲು ಪಶುಸಂಗೋಪನಾ ಇಲಾಖೆ ಯೋಜನೆ ಎಂದು ಇಲಾಖೆಯ ಹೆಚ್ಚುವರಿ ಆಯುಕ್ತ ಡಾ.ಧನಂಜಯ್ ಪರ್ಕಳೆ ತಿಳಿಸಿದ್ದಾರೆ. ಸದ್ಯಕ್ಕೆ ಮೊಟ್ಟೆ ಕೊರತೆ ನೀಗಿಸಲು ಕರ್ನಾಟಕ, ತೆಲಂಗಾಣ, […]

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ 9 ಮಂದಿ ಬಂಧನ

ಬೆಂಗಳೂರು,ಆ.19-ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನನ್ನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ. ಎಲ್ಲರೂ ಸಂಯಮದಿಂದ ಮಾತನಾಡಬೇಕು, ಎಲ್ಲರೂ ರಾಜಕರಣ ಮಾಡೋಣ. ಶಾಂತಿ ಕಾಪಾಡಲು ಯೋಚಿಸಿ ಮಾತನಾಡಬೇಕು ಎಂದರು. ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಸಾರ್ವಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಅವರು ಸ್ವಾತಂತ್ರ್ಯ ಹೋರಾಟ ಮಾಡಿದ್ದಾಗ ನಾವು ಹುಟ್ಟಿರಲಿಲ್ಲ. […]

ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದ ಜತೆಗೆ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾಚಿಕ್ಕಿ

ಬೆಂಗಳೂರು,ಜು.21- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾಚಿಕ್ಕಿ ವಿತರಿಸಲು ಸರಕಾರ ನಿರ್ಧರಿಸಿದೆ. ಶಾಲಾ ಮಕ್ಕಳಲ್ಲಿರುವ ಅಪೌಷ್ಟಿಕತೆ ನಿವಾರಣೆಗಾಗಿ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ 1ರಿಂದ 8ನೇ ತರಗತಿಯಲ್ಲಿ ಓದುತ್ತಿರುವ ಎಲ್ಲಾ ಜಿಲ್ಲೆಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 46 ದಿನಗಳ ಕಾಲ ವಿತರಿಸಲಾಗುತ್ತದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಲ್ಯಾಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಫ್ಲೆಕ್ಸಿ ಅನುದಾನದಡಿ ಪೂರಕ […]