ಈದ್ಗಾ ಮೈದಾನದಲ್ಲಿ ಅದ್ದೂರಿಯಾಗಿ ಸ್ವಾತಂತ್ರ್ಯೋತ್ಸವ ಆಚರಿಸುತ್ತೇವೆ : ಜಮೀರ್
ಬೆಂಗಳೂರು,ಆ.8- ಚಾಮರಾಜಪೇಟೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಈದ್ಗಾ ಆಟದ ಮೈದಾನದಲ್ಲಿ ಈ ವರ್ಷ ಆಗಸ್ಟ್ 15ರಂದು ಧ್ವಜಾರೋಹಣ ಮಾಡಿ ಅತ್ಯಂತ ಸಡಗರದಿಂದ ಸ್ವಾತಂತ್ರ್ಯೋತ್ಸವ ಆಚರಿಸಲಿದ್ದೇವೆ ಎಂದು ಶಾಸಕ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಧ್ವಜಾರೋಹಣ ಕಾರ್ಯಕ್ರಮದ ಸಿದ್ಧತೆಗೆ ಇಂದು ಚಾಮರಾಜಪೇಟೆಯ ಆಟದ ಮೈದಾನವನ್ನು ವೀಕ್ಷಿಸಿದ ಬಳಿಕ ಪತ್ರಕರ್ತರ ಪ್ರಶ್ನೆಗೆ ಅವರು ಉತ್ತರಿಸಿದರು. ಮಾಧ್ಯಮದವರು ದಯವಿಟ್ಟು ಗೊಂದಲ ಸೃಷ್ಟಿಸಬೇಡಿ. ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಹಾಗೂ ಕನ್ನಡ ರಾಜ್ಯೋತ್ಸವದಂದು ಚಾಮರಾಜಪೇಟೆಯ ಆಟದ ಮೈದಾನದಲ್ಲಿ ಇನ್ನು ಮುಂದೆ ಪ್ರತಿ ವರ್ಷ ಧ್ವಜಾರೋಹಣ […]