ಟೆಸ್ಟ್ ನಿಂದ ಡೇವಿಡ್ ವಾರ್ನರ್ ಔಟ್

ನವದೆಹಲಿ, ಫೆ. 21- ಭಾರತ ವಿರುದ್ಧ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದ ಆಸ್ಟ್ರೇಲಿಯಾ ತಂಡದ ಸ್ಟಾರ್ ಬ್ಯಾಟರ್ ಡೇವಿಡ್ ವಾರ್ನರ್ ಅವರು ಬಾರ್ಡರ್- ಗವಾಸ್ಕರ್ ಸಂಪೂರ್ಣ ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ತಿಳಿಸಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ವೇಳೆ ಡೇವಿಡ್ ವಾರ್ನರ್ ಮೊಹಮ್ಮದ್ ಸಿರಾಜ್ ಅವರ ಬೌಲಿಂಗ್‍ನಲ್ಲಿ ಮೊಣಕೈಗೆ ಗಾಯ ಮಾಡಿಕೊಂಡಿದ್ದ ವಾರ್ನರ್, ಮತ್ತೊಬ್ಬ ವೇಗಿ ಮೊಹಮ್ಮದ ಶಮಿ ಎಸೆತದಲ್ಲಿ ತಲೆಗೆ ಪೆಟ್ಟು ಮಾಡಿಕೊಂಡಿ ದ್ದರು. […]