ಉಪರಾಷ್ಟಪತಿ ಚುನಾವಣೆ : ಇಂದು ಮತದಾನ, ಸಂಜೆ 5 ಗಂಟೆಯ ನಂತರ ಮತ ಎಣಿಕೆ

ನವದೆಹಲಿ,ಆ.6- ದೇಶದ 14ನೇ ಉಪರಾಷ್ಟ್ರಪತಿ ಆಯ್ಕೆಗೆ ಇಂದು ಸಂಸತ್ ಭವನದಲ್ಲಿ ಚುನಾವಣೆ ನಡೆದಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಸಂಸತ್ ಭವನದ ಕೊಠಡಿ ಸಂಖ್ಯೆ 63ರಲ್ಲಿ ಮತದಾನ ನಡೆದಿದೆ. ಬಿಜೆಪಿ ನೇತೃತ್ವದ ಎನ್‍ಡಿಎ ಹಾಗೂ ಮಿತ್ರ ಪಕ್ಷಗಳ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನ್ಕರ್ ಮತ್ತು ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಕಾಂಗ್ರೆಸ್‍ನ ಹಿರಿಯ ನಾಯಕಿ ಮಾರ್ಗರೇಟ್ ಆಳ್ವಾ ಕಣದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ […]