ರಿಮೋಟ್ ಎಲೆಕ್ಟ್ರಾನಿಕ್ ಮತಯಂತ್ರ ಬಳಕೆಗೆ ಸಿದ್ಧತೆ

ನವದೆಹಲಿ,ಡಿ.29- ದೇಶೀಯ ವಲಸಿಗರು ಮತದಾನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕೇಂದ್ರ ಚುನಾವಣಾ ಆಯೋಗ, ಮೂಲ ಮಾದರಿಯ ರಿಮೋಟ್ ಎಲೆಕ್ಟ್ರಾನಿಕ್ ಮತಯಂತ್ರವನ್ನು ಸಜ್ಜುಗೊಳಿಸಿದ್ದು, ರಾಜಕೀಯ ಪಕ್ಷಗಳ ಅಭಿಪ್ರಾಯ ಸಂಗ್ರಹಕ್ಕೆ ಜನವರಿ 16ರಂದು ಪ್ರಾತ್ಯಕ್ಷಿಕೆ ಆಯೋಜಿಸಿದೆ. ದೂರದ ಒಂದು ಮತಗಟ್ಟೆಯಲ್ಲಿ ಕುಳಿತ ಚುನಾವಣಾಧಿಕಾರಿ ಏಕಕಾಲಕ್ಕೆ 72 ಮತ ಕ್ಷೇತ್ರಗಳನ್ನು ನಿಯಂತ್ರಿಸುವ ತಂತ್ರಜ್ಞಾನವನ್ನು ಈ ಮತಯಂತ್ರ ಹೊಂದಿದೆ. ಸಾರ್ವಜನಿಕ ವಲಯದ ಉದ್ಯಮ ಅಭಿವೃದ್ಧಿ ಪಡಿಸಿರುವ ಬಹು ಕ್ಷೇತ್ರೀಯ ರಿಮೋಟ್ ಕಂಟ್ರೋಲ್ ಮತಯಂತ್ರ ಚುನಾವಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸಲಿದೆ ಎಂದು ಮುಖ್ಯಚುನಾವಣಾ ಆಯುಕ್ತ ರಾಜೀವ್ […]

ಹಲವು ವರ್ಷಗಳಿಂದ ತಳವೂರಿರುವ ಬಿಬಿಎಂಪಿ ಅಧಿಕಾರಿಗಳ ಎತ್ತಂಗಡಿಗೆ ಸಿದ್ಧತೆ

ಬೆಂಗಳೂರು,ಡಿ.10- ಕಳೆದ ಹಲವಾರು ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಬಿಬಿಎಂಪಿ ಕಂದಾಯ ಇಲಾಖೆ ನೌಕರರ ವರ್ಗಾವಣೆಗೆ ಸಿದ್ದತೆ ನಡೆಸಲಾಗಿದೆ. ಬಿಬಿಎಂಪಿ 198 ವಾರ್ಡ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲು ತೀರ್ಮಾನಿಸಲಾಗಿದ್ದು, ಮೊದಲ ಹಂತದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ವಿಶೇಷ ಆಯುಕ್ತ ದೀಪಕ್ ತಿಳಿಸಿದ್ದಾರೆ. ಮುಂದಿನ ವರ್ಷದ ಮೇ 24ಕ್ಕೆ ರಾಜ್ಯ ವಿಧಾನಸಭೆಯ ಅವ ಅಂತ್ಯವಾಗಲಿದ್ದು, ಕೇಂದ್ರ ಚುನಾವಣಾ ಆಯೋಗ ಈಗಾಗಲೆ ಚುನಾವಣಾ ಸಿದ್ದತೆ ಆರಂಭಿಸಿದ್ದು, ರಾಜ್ಯ ಸರ್ಕಾರಿ ಇಲಾಖೆ […]

ಚುನಾವಣಾ ಸುಧಾರಣೆಯ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು : ವಂದಿತಾ ಶರ್ಮ

ಬೆಂಗಳೂರು,ಆ.1-ಭಾರತದ ಚುನಾವಣಾ ಆಯೋಗ ಇಂದಿನಿಂದ ಅನುಷ್ಠಾನಗೊಳಿಸುತ್ತಿರುವ ಚುನಾವಣಾ ಸುಧಾರಣೆಗಳನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಉದ್ಘಾಟಿಸಿದರು. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿ ವತಿಯಿಂದ ವಿಕಾಸಸೌಧದಲ್ಲಿಂದು ಆಯೋಜಿಸಿದ್ದ ಚುನಾವಣಾ ಸುಧಾರಣಾ ಕಾರ್ಯಕ್ರಮ ಉದ್ಘಾಟಿಸಿ ನಂತರ ಅವರು ಮಾತನಾಡಿದರು. ವಿಶ್ವದಲ್ಲೇ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ದೇಶ ಭಾರತ. ದೇಶದಲ್ಲಿ ಕೂಡ ಪ್ರಜಾಪ್ರಭುತ್ವ ಯಶಸ್ವಿಯಾಗಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ಅದಕ್ಕಾಗಿ ಚುನಾವಣಾ ಆಯೋಗ ಹಲವು ಸುಧಾರಣೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಅಲ್ಲದೆ ಸರಳೀಕರಣ ತಂದು ಪಾರದರ್ಶಕವಾಗಿ ಅನುಷ್ಠಾನಗೊಳಿಸುತ್ತಿದೆ. ಸತತ […]