ಚುನಾವಣಾ ವ್ಯವಸ್ಥೆ ಸುಧಾರಣೆಗೆ ಸಾಮೂಹಿಕ ಚರ್ಚೆ ಅಗತ್ಯ : ಸ್ಪೀಕರ್‌ ಕಾಗೇರಿ

ಬೆಂಗಳೂರು,ಜ.29- ಚುನಾವಣೆ ವ್ಯವಸ್ಥೆ ಸುಧಾರಣೆಗೆ ಸಾಮೂಹಿಕ ಚರ್ಚೆ ನಡೆಸಬೇಕಾದ ಅಗತ್ಯವಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗವು ಯಾಂತ್ರಿಕವಾಗಿ ಚುನಾವಣೆ ನಡೆಸಲಷ್ಟೇ ಸುಧಾರಣೆ ತರಲು ಪ್ರಯತ್ನ ಮಾಡಬೇಕು. ಅದು ತನ್ನ ಜವಾಬ್ದಾರಿಯನ್ನು ಹೆಚ್ಚಿಸಿಕೊಳ್ಳಬೇಕು. ಜಾತಿ, ಹಣ, ತೋಳ್ಬಲ, ಪಕ್ಷಾಂತರ ಪಿಡುಗಿನಿಂದ ವ್ಯವಸ್ಥೆ ಹದಗೆಟ್ಟಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಹೀಗಾಗಿ ಈ ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಎಲ್ಲಾ ಅನುಭವಿಗಳು ಪ್ರಯತ್ನ ಮಾಡಬೇಕು. ಈ ಬಗ್ಗೆ ವ್ಯಾಪಕ ಚರ್ಚೆಯು […]