ಸದ್ಯದಲ್ಲೇ ಸಾರ್ವಜನಿಕರಿಗೆ ಕರೆಂಟ್ ಶಾಕ್, ಸಚಿವ ಸುನೀಲ್‍ಕುಮಾರ್ ಸುಳಿವು

ಬೆಂಗಳೂರು,ಜ.21- ವಿದ್ಯುತ್ ದರ ಹೆಚ್ಚಳ ಮಾಡುವುದು ಅನಿವಾರ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವ ಸುನೀಲ್‍ಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯುತ್ ಮಾರ್ಗ ಬದಲಾವಣೆ, ಹೊಸ ಉಪ ವಿಭಾಗ ನಿರ್ಮಾಣ ಸೇರಿದಂತೆ ಅಭಿವೃದ್ದಿ ಕಾಮಗಾರಿಗಳ ಹೊರೆಯನ್ನು ಗ್ರಾಹಕರ ಮೇಲೆ ಹಾಕುವುದು ಅನಿವಾರ್ಯವಾಗಿದೆ ಎಂದರು. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಒಪ್ಪಿಗೆ ಕೊಟ್ಟ ನಂತರ ವಿದ್ಯುತ್ ವಿತರಣಾ ಕಂಪೆನಿಗಳು ದರ ಪರಿಷ್ಕರಣೆ ಮಾಡಲಿವೆ ಎಂದು ತಿಳಿಸಿದರು. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ನಾಲ್ಕು ಸಾವಿರ ಕೋಟಿ […]