ವಿದ್ಯಾರ್ಹತೆಗೆ ತಕ್ಕ ಉದ್ಯೋಗ : ಗೋಪಾಲಯ್ಯ ಭರವಸೆ

ಬೆಂಗಳೂರು,ಫೆ.5- ಮಹಾಲಕ್ಷ್ಮಿಲೇಔಟ್‍ನಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳದಲ್ಲಿ ನೂರಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, ವಿದ್ಯಾರ್ಹತೆಗೆ ತಕ್ಕ ಉದ್ಯೋಗ ನೀಡಲಾಗುತ್ತದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಶ್ರೀಮಹಾಲಕ್ಷ್ಮಿ ಎಜುಕೇಷನಲ್ ಟ್ರಸ್ಟ್ ವತಿಯಿಂದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬೋವಿಪಾಳ್ಯದ ಬಿಜಿಎಸ್ ಕಾಲೇಜು ಕ್ಯಾಂಪಸ್ ನಲ್ಲಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕುತೂಹಲ ಕೆರಳಿಸಿದ ಬೊಮ್ಮಾಯಿ ಹಾಗೂ […]

ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ಕಡ್ಡಾಯಕ್ಕೆ ಕಾನೂನು : ಬೊಮ್ಮಾಯಿ

ಹಾವೇರಿ,ಜ.6- ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯವಾಗಿ ಶೇ.80ರಷ್ಟು ಉದ್ಯೋಗ ಕೊಡುವ ಕಾನೂನನ್ನು ಶೀಘ್ರದಲ್ಲೇ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆಯಲ್ಲಿ ಆರಂಭವಾದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉದ್ಘಾಟನಾ ಭಾಷಣ ಮಾಡಿದ ಅವರು, ತಮ್ಮ 20 ನಿಮಿಷಗಳ ಭಾಷಣದಲ್ಲಿ ಕನ್ನಡ, ಸಾಹಿತ್ಯ, ಸಂಸ್ಕøತಿ, ಭಾಷೆ, ಬೆಳೆದು ಬಂದ ಪರಂಪರೆ ಸೇರಿದಂತೆ ಹತ್ತು ಹಲವು ವಿಷಯಗಳನ್ನು ಪ್ರಸ್ತಾಪಿಸಿದರು. ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕೊಡಬೇಕು […]

ಆರ್ಥಿಕ ದುರ್ಬಲರ ಮೀಸಲಾತಿ ಅನುಷ್ಠಾನಕ್ಕೆ ವಿಶೇಷ ಕಾಯ್ದೆ

ಬೆಂಗಳೂರು,ನ.9- ಆರ್ಥಿಕವಾಗಿ ಹಿಂದುಳಿದ ವರ್ಗ (ಇಡಬ್ಲ್ಯುಎಸ್) ದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ಕಾಯ್ದೆಯನ್ನು ರಾಜ್ಯದಲ್ಲಿ ಅನುಷ್ಠಾನ ಮಾಡಲು ವಿಶೇಷ ಕಾಯ್ದೆ ರೂಪಿಸಲು ಮುಂದಾಗಿದೆ. ಮುಂದಿನ ತಿಂಗಳು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನಮಂಡಲದ ಉಭಯ ಸದನಗಳಲ್ಲಿ ಈ ಕಾಯ್ದೆಯನ್ನು ಮಂಡಿಸಲು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಸಜ್ಜಾಗಿದೆ. ಈಗಾಗಲೇ ಕಾಯ್ದೆ ಅನುಷ್ಠಾನಕ್ಕೆ ಸಿದ್ದತೆಗಳನ್ನು ಕೈಗೊಂಡಿದ್ದು, ಕೇಂದ್ರ ಸರ್ಕಾರದ ಯಥಾವತ್ ಕಾಯ್ದೆಯನ್ನೇ ರಾಜ್ಯದಲ್ಲೂ ಅನುಷ್ಠಾನ ಮಾಡಲಾಗುತ್ತಿದೆ. ವಿಧಾನಸಭೆಯಲ್ಲಿ […]

ಉದ್ಯೋಗ ದಕ್ಕಿಸಿಕೊಂಡ ರಾಜ್ಯದ 1000 ಯುವಕ-ಯುವತಿಯರು

ಬೆಂಗಳೂರು,ಅ.22- ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಯುವಕರು ಮತ್ತು ಯುವತಿಯರಿಗೆ ಉದ್ಯೋಗ ಕಲ್ಪಿಸುವ ರೋಜ್‍ಗಾರ ಉದ್ಯೋಗ ಮೇಳದಲ್ಲಿ ರಾಜ್ಯದ ಒಂದು ಸಾವಿರ ಪ್ರತಿಭಾವಂತರಿಗೆ ಉದ್ಯೋಗ ಲಭಿಸಿದೆ. ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರು ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಿ ಶುಭ ಕೋರಿದರು. ಪ್ರಧಾನಿ ನರೇಂದ್ರಮೋದಿ ಅವರು ದೆಹಲಿಯಲ್ಲಿ ಯೋಜನೆಗೆ ಚಾಲನೆ ನೀಡುತ್ತಿದ್ದಂತೆ ಬೆಂಗಳೂರಿನಲ್ಲೂ ಚಾಲನೆ ಕೊಡಲಾಯಿತು. ಮೊದಲ ಹಂತದಲ್ಲಿ ರಾಜ್ಯದಿಂದ ಕೇಂದ್ರ ಸರ್ಕಾರದ 38 ಇಲಾಖೆಗಳಲ್ಲಿ […]

ಬೆಂಗಳೂರಿನ ಮೀನು ಪ್ರಿಯರಿಗೆ ಸರ್ಕಾರದಿಂದ ಸಿಹಿಸುದ್ದಿ

ಬೆಂಗಳೂರು,ಅ.16- ರಾಜಧಾನಿ ಬೆಂಗಳೂರಿನಲ್ಲಿ ಸಾಕಷ್ಟು ಮೀನಿನ ಬೇಡಿಕೆ ಇರುವುದರಿಂದ ಬಿಬಿಎಂಪಿ ವ್ಯಾಪ್ತಿಯ ಎಲ್ಲ ವಾರ್ಡ್‍ಗಳಲ್ಲಿ ಮೀನು ಮಾರಾಟ ಮಾಡುವ ಮಳಿಗೆಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಬಂದರು ಮತ್ತು ಮೀನುಗಾರಿಕೆ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಒಳನಾಡು ಮೀನುಗಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಬಿಎಂಪಿಯ ಎಲ್ಲಾ ವಾರ್ಡ್‍ಗಳಲ್ಲಿ ಮೀನು ಮಾರಾಟ ಮಾಡುವ ಮಳಿಗೆಗಳನ್ನು ಪ್ರಾರಂಭ ಮಾಡುವುದರಿಂದ ಈ ಉದ್ಯೋಗಕ್ಕೆ ಹೆಚ್ಚಿನ ಪ್ರೋತ್ಸಾಹ ಸಿಗಲಿದೆ ಎಂದು ಅಭಿಪ್ರಾಯಪಟ್ಟರು. ಖಾಸಗಿಯವರು ಮಳಿಗೆ ಪ್ರಾರಂಭಿಸಲು […]

ಕರ್ನಾಟಕ ಉದ್ಯೋಗ ನೀತಿ 2022-25ಕ್ಕೆ ಸಚಿವ ಸಂಪುಟ ಒಪ್ಪಿಗೆ, ಕಸಾಪ ಸ್ವಾಗತ

ಬೆಂಗಳೂರು, ಜು.27- ಕನ್ನಡಿಗರಿಗೇ ಹೆಚ್ಚಿನ ಉದ್ಯೋಗ ದಕ್ಕಿಸಲು ಕರ್ನಾಟಕ ಉದ್ಯೋಗ ನೀತಿ 2022-25ಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿರುವ ಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತಿಸಿದೆ. ಖಾಸಗಿ ವಲಯಗಳಲ್ಲೂ ಕನ್ನಡಿಗರಿಗೆ ಕೆಲಸದ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕನ್ನಡಿಗರ ಬಹುದಿನದ ಬೇಡಿಕೆಗೆ ಸರಕಾರ ಸ್ಪಂದಿಸಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ ಹೇಳಿದ್ದಾರೆ. ನಮ್ಮ ನಾಡಿನಲ್ಲಿ ನಮ್ಮವರೇ ನಿರುದ್ಯೋಗದ ಪಿಡುಗಿನಲ್ಲಿ ಸಿಲುಕಿಕೊಂಡಿದ್ದಾರೆ. ಸರ್ಕಾರ ಖಾಸಗಿ ಕ್ಷೇತ್ರದಲ್ಲಿ […]

ಪೊಲೀಸ್ ಬಲೆಗೆ ಬಿದ್ದ ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ವಂಚಕ

ಬೆಂಗಳೂರು, ಜ.24- ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕಂಪೆನಿಯೊಂದರ ನಕಲಿ ಆಫರ್ ಲೆಟರ್ ನೀಡಿ ಲಕ್ಷಾಂತರ ರೂ. ಪಡೆದು ಪರಾರಿಯಾಗಿದ್ದ ವಂಚಕನೊಬ್ಬನನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಪುಣೆ ಮೂಲದ ಸಂಜೀವ್ ಗಂಗಾರಾಮ್ ಗೋರ್ಖಾ ಬಂತ ವಂಚಕ. ಈತ ಇದುವರೆಗೂ 40ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ವಂಚಿಸಿರುವುದು ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಕಂಪೆನಿಯೊಂದರಲ್ಲಿ ಉದ್ಯೋಗ ಖಾಲಿ ಇದೆ ಎಂದು ಉದ್ಯೋಗಾಕಾಂಕ್ಷಿಗಳನ್ನು ಸಂದರ್ಶನಕ್ಕೆ ಕರೆಸಿಕೊಂಡು ನಂತರ ನಿಮಗೆ ಉದ್ಯೋಗ ಕೊಡುವುದಾಗಿ ಹೇಳಿ ಕಂಪೆನಿಯೊಂದರ ನಕಲಿ ಆಫರ್ ಲೆಟರ್ ನೀಡಿ ಅವರುಗಳಿಂದ ಲಕ್ಷಾಂತರ ರೂ. […]