ಭಾರೀ ಮಳೆಯಿಂದ ಸೇನಾ ಆವರಣದ ಗೋಡೆ ಕುಸಿದು 9 ಮಂದಿ ಸಾವು
ಲಕ್ನೋ, ಸೆ- ಭಾರೀ ಮಳೆಯಿಂದಾಗಿ ಸೇನಾ ಆವರಣದ ಗಡಿ ಗೋಡೆ ಕುಸಿದು ಒಂಬತ್ತು ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಲಕ್ನೋ ಹೊರ ಪ್ರದೇಶದಲ್ಲಿ ನಡೆದಿದೆ. ದಿಲ್ಕುಶಾ ಬಳಿ ಭಾರತೀಯಸೇನಾ ಪಡೆಯ ಪ್ರದೇಶವಿದ್ದು ಸುತ್ತಲು ಭದ್ದತೆಗಾಗಿ ದೊಡ್ಡಗೋಡೆ ಕಟ್ಟಲಾಗಿದೆ. ಇತ್ತೀಚೆಗೆ ಕೆಲವು ಕಾರ್ಮಿಕರು ಗುಡಿಸಲು ಕಟ್ಟಿಕೊಂಡುವಾಸಿಸುತ್ತಿದ್ದರು. ಕಳೆದ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಹೊರಭಾಗದ ಗೋಡೆ ಗುಡಿಸಲ ಮೇಲೆ ಕುಸಿದಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಪಿಯೂಷ್ ಮೊರ್ಡಿಯಾ ತಿಳಿಸಿದ್ದಾರೆ. ಸುಮಾರು 15 ಮಂದಿ ಇಲ್ಲಿ ವಾಸವಿದ್ದರೆನ್ನಲಾಗಿದೆ […]