ರಾಜ್ಯದಲ್ಲಿ ಮತ್ತೆ ಜೋರಾಯ್ತು ಧರ್ಮ ದಂಗಲ್

ಬೆಂಗಳೂರು,ನ.24- ರಾಜ್ಯದಲ್ಲಿ ಮತ್ತೆ ಧರ್ಮ ದಂಗಲ್ ಆರಂಭವಾಗುವ ಮುನ್ಸೂಚನೆಗಳು ಗೋಚರಿಸುತ್ತಿವೆ.ರಾಜ್ಯದಲ್ಲಿ ನಡೆಯುವ ದೇವರ ಜಾತ್ರೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ. ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಹಿಂದೂ ಧರ್ಮದ ವ್ಯಾಪಾರಸ್ಥರಿಗೆ ಮಾತ್ರ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಹಿಂದೂ ಜನಜಾಗೃತಿ ಸಮಿತಿ ಅಧ್ಯಕ್ಷ ಮೋಹನ್‍ಗೌಡ ಧಾರ್ಮಿಕ ದತ್ತಿ ಇಲಾಖೆ ಹಾಗೂ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಕಾರ್ತಿಕ ಕಡೆ ಸೋಮವಾರ ನಗರದ […]