ಕೋವಿಡ್‍ ನಿರ್ನಾಮ ಮಾಡಲು ಪ್ರತಿಯೊಬ್ಬರು ಲಸಿಕೆ ಪಡೆಯಬೇಕು: ಸಚಿವ ಸುಧಾಕರ್

ಬೆಂಗಳೂರು,ಜ.3-ಪೊಲೀಯೋ ರೋಗದಂತೆ ಕೋವಿಡ್‍ನ್ನು ಸಂಪೂರ್ಣ ನಿರ್ನಾಮ ಮಾಡಲು ಕಡ್ಡಾಯವಾಗಿ ಪ್ರತಿಯೊಬ್ಬರು ಲಸಿಕೆ ಪಡೆಯಬೇಕೆಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಮೂಡಲಪಾಳ್ಯದ ಬಿಬಿಎಂಪಿ ಪ್ರೌಢಶಾಲಾ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಇದುವರೆಗೆ 8.65 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ. ದೇಶದಲ್ಲಿ 145 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಪೊಲೀಯೋವನ್ನು 2014ಕ್ಕೆ ದೇಶದಿಂದಲೇ ನಿರ್ಮೂಲನೆ ಮಾಡಲು ಸಾಧ್ಯವಾಗಿದ್ದು ಲಸಿಕೆಯಿಂದ ಎಂಬುದನ್ನು ಮರೆಯಬಾರದು. ತಮಿಳುನಾಡು ಮಹಾರಾಷ್ಟ್ರಕ್ಕೆ ಹೋಲಿಸಿದರೆ […]