EWS ಮೀಸಲಾತಿ ವರ್ಗಾಯಿಸದಂತೆ ಬ್ರಾಹ್ಮಣ ಮಹಾಸಭಾ ಒತ್ತಾಯ

ಬೆಂಗಳೂರು,ಜ.5- ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ನೀಡಲಾಗಿರುವ ಮೀಸಲಾತಿಯನ್ನು ಬೇರೆ ಸಮುದಾಯಕ್ಕೆ ವರ್ಗಾವಣೆಗೊಳಿಸಬಾರದು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಒತ್ತಾಯಿಸಿದೆ. ಬೇರೆ ಸಮುದಾಯದವರಿಗೆ ಮೀಸಲಾತಿ ನೀಡಲು ನಾವು ವಿರೋಧಿಸುವುದಿಲ್ಲ. ಆದರೆ, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾಗಿರುವ ಶೇ.10ರಷ್ಟು ಮೀಸಲಾತಿಯನ್ನು ಕಡಿತಗೊಳಿಸಿ ಬೇರೆ ಸಮುದಾಯಕ್ಕೆ ನೀಡಲು ಒಪ್ಪುವುದಿಲ್ಲ ಎಂದು ಮಹಾಸಭಾದ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಹೇಳಿದ್ದಾರೆ. ಸರ್ಕಾರ ಯಾವುದೇ ಸಮುದಾಯಕ್ಕೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಶೇ.10ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರಕ್ಕೆ […]
ಶೇ.10ರಷ್ಟು ಮೀಸಲಾತಿ : ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಕಾರ್ಯಕ್ಕೆ ಸಂದ ಜಯ

ನವದೆಹಲಿ,ನ.7- ಇಡಬ್ಲ್ಯುಎಸ್ ವಿಷಯದಲ್ಲಿ ಸುಪ್ರೀಂಕೋರ್ಟ್ ತೀರ್ಪು ಪ್ರಧಾನಿ ನರೇಂದ್ರಮೋದಿಯವರ ಸಾಮಾಜಿಕ ನ್ಯಾಯದ ಕಾರ್ಯ ಯೋಜನೆಗೆ ದೊರೆತ ಜಯ ಎಂದು ಬಿಜೆಪಿ ವ್ಯಾಖ್ಯಾನಿಸಿದೆ. ಬಿಜೆಪಿಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಪ್ರತಿಕ್ರಿಯಿಸಿದ್ದು, ಮೀಸಲಾತಿ ಹೊರತಾದ ವರ್ಗಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಪ್ರಧಾನಿ ನರೇಂದ್ರಮೋದಿ ಸರ್ಕಾರದ ತೀರ್ಮಾನಕ್ಕೆ ಕಾನೂನಿನ ಬೆಂಬಲ ದೊರೆತಿದೆ ಎಂದಿದ್ದಾರೆ. ಸಾಮಾಜಿಕ ನ್ಯಾಯದಾನದಲ್ಲಿ ಇದು ಹೊಸ ದಿಕ್ಕನ್ನು ಆರಂಭಿಸುತ್ತಿದೆ. ಪ್ರಧಾನಿಯವರ ಗರೀಬ್ ಕಲ್ಯಾಣ್‍ಗೆ ಹೊಸ ಸೇರ್ಪಡೆ ಎಂದು ಹೇಳಿದ್ದಾರೆ. ಬಿಜೆಪಿಯ ಪ್ರಧಾನ ಕಾರ್ಯದರ್ಶಿ […]
ಮೀಸಲಾತಿಗೆ ಆರ್ಥಿಕತೆ ಮಾನದಂಡವಲ್ಲ : ಸಿದ್ದರಾಮಯ್ಯ

ಬೆಳಗಾವಿ,ನ.7- ಸಂವಿಧಾನದ ಆಶಯಗಳ ಪ್ರಕಾರ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಲು ಪರಿಗಣಿಸಲಾಗುತ್ತದೆಯೇ ಹೊರತು ಆರ್ಥಿಕವಾಗಿ ಹಿಂದುಳಿದಿರುವಿಕೆಯನ್ನು ಗಣನೆಗೆ ತೆಗೆದುಕೊಳ್ಳುವಂತಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಬ್ಲ್ಯೂಎಸ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ನ ಐವರು ನ್ಯಾಯಮೂರ್ತಿಗಳ ಪೀಠ ತೀರ್ಪು ಪ್ರಕಟಿಸಿದೆ. ನಾನು ಅದರ ಕುರಿತು ಚರ್ಚೆ ಮಾಡಲು ಬಯಸುವುದಿಲ್ಲ. ಆದರೆ, ಸಂವಿಧಾನವನ್ನು ಓದಿ ಅರ್ಥೈಸಿಕೊಂಡಿರುವ ಮಟ್ಟಿಗೆ ಹೇಳುವುದಾದರೆ ಮೀಸಲಾತಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳೇ ಮಾನದಂಡ ಎಂದರು. ಸಿದ್ದರಾಮಯ್ಯ ಕಾಂಗ್ರೆಸ್ ಗೆಲ್ಲುತ್ತೆ ಎಂಬ […]