ಕೇಂದ್ರ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಬಂಪರ್ ಕೊಡುಗೆ ನಿರೀಕ್ಷೆ

ಬೆಂಗಳೂರು,ಜ.31- ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ಬಹುನಿರೀಕ್ಷಿತ ಪ್ರಸಕ್ತ ಸಾಲಿನ ಬಜೆಟ್ ನಾಳೆ ಮಂಡನೆಯಾಗಲಿದ್ದು, ವಿಧಾನಸಭೆ ಚುನಾವಣೆ ಹೊಸ್ತಿನಲ್ಲಿರುವ ಕರ್ನಾಟಕಕ್ಕೆ ಬಂಪರ್ ಕೊಡುಗೆಗಳನ್ನು ನಿರೀಕ್ಷಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದರಿಂದ ಸಹಜವಾಗಿ ತಮ್ಮ ತವರು ರಾಜ್ಯಕ್ಕೆ ಬಜೆಟ್‍ನಲ್ಲಿ ಉಡುಗೊರೆಗಳ ಭಾಗ್ಯವನ್ನು ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಮತದಾರರನ್ನು ಆಕರ್ಷಿಸಲು ಒಂದಿಷ್ಟು ಜನಪ್ರಿಯ ಯೋಜನೆಗಳ ಘೋಷಣೆ ಹಾಗೂ ನೆನೆಗುದಿಗೆ ಬಿದ್ದಿರುವ ಯೋಜನೆಗಳ ಅನುಷ್ಠಾನಕ್ಕೆಹಸಿರು ನಿಶಾನೆ ತೋರುವ ಸಾಧ್ಯತೆಯನ್ನು ತಳ್ಳಿ […]