ಯುಗಾದಿಗೂ ಮುನ್ನ ರಾಜ್ಯದಲ್ಲಿ ಮಳೆ ಸಾಧ್ಯತೆ

ಬೆಂಗಳೂರು,ಮಾ.14- ತಾಪಮಾನ ಹೆಚ್ಚಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಚದುರಿದಂತೆ ಕೆಲವೆಡೆ ಇನ್ನೊಂದು ವಾರ ಬೇಸಿಗೆ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಯುಗಾದಿ ಹಬ್ಬದವರೆಗೂ ಮಳೆಯಾಗುವ ಮುನ್ಸೂಚನೆಗಳು ಕಂಡುಬಂದಿವೆ. ರಾಜ್ಯದಲ್ಲಿ 5 ಮಿ.ಮೀನಿಂದ 15 ಮಿ.ಮೀವರೆಗೆ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕರು ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು. ಮಾ.16ರಿಂದ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಅಲ್ಲಲ್ಲಿ ಚದುರಿದಂತೆ ಸಾಧಾರಣ […]
ಚೀನಾ ಪುಂಡಾಟಕ್ಕೆ ಬ್ರೇಕ್ ಹಾಕಲು ಒಂದಾದ ಪ್ರಮುಖ ರಾಷ್ಟ್ರಗಳು

ವಾಷಿಂಗ್ಟನ್,ಮಾ.9- ಫೆಸಿಫಿಕ್ ಪ್ರಾಂತ್ಯದಲ್ಲಿ ಹೆಚ್ಚುತ್ತಿರುವ ಚೀನಾ ಪ್ರಾಬಲ್ಯಕ್ಕೆ ತಕ್ಕ ಎದಿರೇಟು ನೀಡಲು ಅಮೆರಿಕ, ಬ್ರಿಟನ್ ಮತ್ತು ಆಸ್ಟ್ರೇಲಿಯಾ ತಂತ್ರ ರೂಪಿಸಿವೆ. ಮುಂದಿನ ವಾರ ಅಮೆರಿಕದಲ್ಲಿ ಸಭೆ ಸೇರಲಿರುವ ಮೂರು ಪ್ರಬಲ ರಾಷ್ಟ್ರಗಳ ಪ್ರಮುಖರು ನಿರೀಕ್ಷಿತ ಪರಮಾಣು ಜಲಾಂತರ್ಗಾಮಿ ಒಪ್ಪಂದಕ್ಕೆ ಸಹಿ ಹಾಕಲು ತೀರ್ಮಾನಿಸಿದ್ದಾರೆ. 18 ತಿಂಗಳ ಮಾತುಕತೆಗಳ ನಂತರ, ಆಸ್ಟ್ರೇಲಿಯಾವು ಎಂಟು ಪರಮಾಣು-ಚಾಲಿತ ಜಲಾಂತರ್ಗಾಮಿ ನೌಕೆಗಳನ್ನು ಪಡೆಯುವ ಯೋಜನೆಗಳನ್ನು ಜಾರಿಗೊಳಿಸುವ ಸಾಧ್ಯತೆಗಳಿವೆ. ಈ ಒಪ್ಪಂದವು ಆಸ್ಟ್ರೇಲಿಯಾ, ಯುನೈಟೆಡ್ ಕಿಂಗ್‍ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‍ನಲ್ಲಿ ಎಯುಕೆಯುಎಸ್ ಎಂದು ಕರೆಯಲ್ಪಡುವ […]