ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೆಗೆ ಫೆ.15 ರಿಂದ ಟೋಲ್ ಫಿಕ್ಸ್

ಬೆಂಗಳೂರು,ಫೆ.2- ಮಹತ್ವಾಕಾಂಕ್ಷೆಯ ಮೈಸೂರು- ಬೆಂಗಳೂರು ಎಕ್ಸಪ್ರೆಸ್ ಕಾರಿಡಾರ್ ರಸ್ತೆಯಲ್ಲಿ ಫೆ.15ರೊಳಗೆ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಕಾಮಗಾರಿಯು ಮೊದಲ ಹಂತದಲ್ಲಿ ಬೆಂಗಳೂರು-ಚನ್ನಪಟ್ಟಣದ ನಿಡಘಟ್ಟದವರೆಗೂ ನಡೆದಿತ್ತು. ಇದು 56 ಕಿಮೀ ಒಳಗೊಂಡಿತ್ತು. ಎರಡನೇ ಹಂತದ ಕಾಮಗಾರಿ ನಿಡಘಟ್ಟದಿಂದ ಮೈಸೂರಿನವರೆಗೆ ನಡೆಯುತ್ತಿದೆ. 61 ಕಿ.ಮೀ. ಕಾಮಗಾರಿ ಭರದಿಂದ ಸಾಗುತ್ತಿದೆ. ಇದೀಗ ಮೊದಲ ಹಂತದ ಬೆಂಗಳೂರು-ನಿಡಘಟ್ಟ ಟೋಲ್ಸಂಗ್ರಹಕ್ಕೆ ಹೆದ್ದಾರಿ ಪ್ರಾಕಾರ ತೀರ್ಮಾನಿಸಿದೆ. ಮೊದಲ ಹಂತದ ಕಾಮಗಾರಿ ಮುಗಿದಿದ್ದು, ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ. ಎರಡನೇ ಹಂತದ ಕಾಮಗಾರಿ ಭರದಿಂದ ಸಾಗುತ್ತಿದೆ. […]

ದಟ್ಟ ಮಂಜು ; ಟ್ರಕ್‍ಗೆ ಬಸ್ ಅಪ್ಪಳಿಸಿ ಮೂರು ಸಾವು

ಲಕ್ನೋ,ಜ.9- ವೇಗವಾಗಿ ಸಂಚರಿಸುತ್ತಿದ್ದ ಬಸ್ ನಿಂತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದು ಮೂರು ಮಂದಿ ಸಾವನ್ನಪ್ಪಿ ಇತರ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಕ್ನೋ-ಆಗ್ರಾ ಎಕ್ಸ್‍ಪ್ರೆಸ್‍ವೇಯಲ್ಲಿ ನಡೆದಿದೆ. ಉತ್ತರಪ್ರದೇಶದ ಥಾಥೀಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಟ್ಟವಾದ ಮಂಜು ತುಂಬಿದ್ದರಿಂದ ಬಸ್ ಚಾಲಕನಿಗೆ ರಸ್ತೆಯಲ್ಲಿ ನಿಂತಿದ್ದ ಟ್ರಕ್ ಕಾಣಿಸದ ಹಿನ್ನೆಲೆಯಲ್ಲಿ ಈ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್‍ನಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಅವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದ್ದು, 18ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು […]

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ದೇವೇಗೌಡರ ಹೆಸರಿಡಿ: ಶರವಣ

ಬೆಂಗಳೂರು, ಜ.5-ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ಮಾಜಿ ಪ್ರಧಾನಿ ದೇವೇಗೌಡರ ಹೆಸರನ್ನು ನಾಮಕರಣ ಮಾಡಿ ಎಂದು ಜೆಡಿಎಸ್ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಟಿ. ಎ.ಶರವಣ ಮನವಿ ಮಾಡಿದ್ದಾರೆ. ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ವೀಕ್ಷಣೆ ಮತ್ತು ವೈಮಾನಿಕ ಸಮೀಕ್ಷೆಗೆ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೇ ಈ ಭಾಗದ ಜನರ ಭಾವನೆಗಳನ್ನು ನೀವು ಅರ್ಥ ಮಾಡಿಕೊಂಡಿದ್ದರೆ, ಈ ಮಹಾರಸ್ತೆಗೆ ಕರ್ನಾಟಕದ ಸಾಕ್ಷಿ ಪ್ರಜ್ಞೆ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಹೆಸರಿಡಿ ಎಂದು […]

ಮುಂದಿನ ತಿಂಗಳು ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆ

ಬೆಂಗಳೂರು,ಜ.5- ಬಹುನಿರೀಕ್ಷಿತ ಬೆಂಗಳೂರು-ಮೈಸೂರು ನಡುವೆ ನಿರ್ಮಾಣ ವಾಗಿರುವ ದಶಪಥ ಎಕ್ಸ್‍ಪ್ರೆಸ್ ವೇಯನ್ನು ಮುಂದಿನ ತಿಂಗಳು ಲೋಕಾರ್ಪಣೆ ಮಾಡಲಾಗುವುದು ಎಂದು ಕೇಂದ್ರ ಭೂ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಬೆಂಗಳೂರು-ಚೆನ್ನೈ ಎಕ್ಸ್‍ಪ್ರೆಸ್ ವೇ ಹೆದ್ದಾರಿಯ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಮಾತನಾಡಿದ ಅವರು, ಬೆಂಗಳೂರು-ಮೈಸೂರು ನಡುವಿನ ಹೆದ್ದಾರಿಯನ್ನು ರಾಷ್ಟ್ರಪತಿ ಇಲ್ಲವೇ ಪ್ರಧಾನಿ ಅವರು ಉದ್ಘಾಟನೆ ಮಾಡಲಿದ್ದಾರೆ. ಶೀಘ್ರದಲ್ಲೇ ದಿನಾಂಕ ನಿಗದಿ ಮಾಡಲಾಗುವುದು ಎಂದರು. ಬೆಂಗಳೂರು- ಮೈಸೂರು ನಡುವಿನ ಈ ಹೆದ್ದಾರಿಯಲ್ಲಿ ಕೇವಲ 1 ಗಂಟೆ […]

ಬೆಂಗಳೂರು-ಮೈಸೂರು ದಶಪಥ ಕಾಮಗಾರಿ ಮುಗಿದ ಬಳಿಕವೇ ಲೋಕಾರ್ಪಣೆ : ಸಿಎಂ

ಬೆಂಗಳೂರು,ಜ.5- ರಾಜಧಾನಿ ಬೆಂಗಳೂರು ಮತ್ತು ಮೈಸೂರು ನಡುವೆ ಸಂಪರ್ಕ ಕಲ್ಪಿಸುವ ದಶಪಥ ರಸ್ತೆಯನ್ನು ಆತುರವಾಗಿ ಉದ್ಘಾಟಿಸದೆ ಕಾಮಗಾರಿ ಪೂರ್ಣಗೊಂಡ ಬಳಿಕವೇ ಲೋಕಾರ್ಪಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ತಿಂಗಳಲ್ಲಿ ಲೋಕಾರ್ಪಣೆಗೆ ಮುಂದಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕೆಲಸ ಸಂಪೂರ್ಣವಾದ ನಂತರವೇ ಲೋಕಾರ್ಪಣೆಯಾಗಲಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆ ದ್ದಾರಿ ಸಚಿವ ನೀತಿ ಗಡ್ಕರಿ ಅವರೊಂದಿಗೆ […]

ಬೆಂಗಳೂರು-ಮೈಸೂರು ದಶಪಥದ ಹೆದ್ದಾರಿ ಅಸುರಕ್ಷ : ಜೆಡಿಎಸ್

ಬೆಂಗಳೂರು, ಜ.5-ಬೆಂಗಳೂರು-ಮೈಸೂರು ನಡುವಿನ ದಶಪಥದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಸುರಕ್ಷತೆ ಹೆಚ್ಚಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿ ಆರೋಪಗಳ ಸುರಿಮಳೆಗೈದಿರುವ ಜೆಡಿಎಸ್, ಬೆಂಗಳೂರು-ಮೈಸೂರು ಮುಖ್ಯ ಹೆದ್ದಾÁರಿಯು ಮಳೆಯ ಕಾರಣದಿಂದ ಜಲಾವೃತಗೊಂಡಾಗ ಜನರ ಸಂಕಷ್ಟ ಆಲಿಸಲು ಬಾರದ ಕೇಂದ್ರ ಸಚಿವರು ಅದ್ಯಾವ ಮುಖ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಿದ್ದೀರಿ? ಈಗ ಅದೇ ರಸ್ತೆ ಕಾಮಗಾರಿಯ ವೈಮಾನಿಕ ಸಮೀಕ್ಷೆ ಮಾಡಲು ಬಂದಿರುವ ತಮಗೆ ಅಲ್ಲಿನ ಅಸಮರ್ಪಕತೆ ವಿಷಯಗಳು ತಿಳಿದಿಲ್ಲವೆ ಎಂದು ಹೇಳಿದೆ. ಸುರಕ್ಷತೆಗಿಂತ ಅಸುರಕ್ಷತೆಯೇ ಹೆಚ್ಚಾಗಿರುವ ಈ […]

ನಿಯಂತ್ರಣ ತಪ್ಪಿ ಟ್ರಕ್‍ಗೆ ಅಪ್ಪಳಿಸಿದ ಕಾರು, 5 ಸಾವು

ಮುಂಬೈ,ನ.18- ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಟ್ರಕ್‍ಗೆ ಅಪ್ಪಳಿಸಿದ ಪರಿಣಾಮ ಐದು ಮಂದಿ ಮೃತಪಟ್ಟು, ಇತರ ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮುಂಬೈ-ಪುಣೆ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಪುಣೆಯಿಂದ ಮುಂಬೈಗೆ ತೆರಳುತ್ತಿದ್ದ ಮಾರುತಿ ಸುಜುಕಿ ಎರ್ಟಿಗಾ ಕಾರು ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖೋಪೋಲಿ ಬಳಿ 11:30ರ ಸುಮಾರಿಗೆ ಹಿಂದಿನಿಂದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಪುಣೆಯಿಂದ ಮುಂಬೈಗೆ ಹೋಗುತ್ತಿದ್ದಾಗ ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಹಿಂದಿನಿಂದ ಟ್ರಕ್‍ಗೆ […]

296 ಕಿ.ಮಿ. ಎಕ್ಸ್ ಪ್ರೆಸ್ ಹೈವೆಗೆ ಪ್ರಧಾನಿ ಮೋದಿ ಚಾಲನೆ

ಲಖ್ನೋ,ಜು.16- 14,850 ಕೋಟಿ ರೂ. ವೆಚ್ಚದ 296 ಕಿಮೀ ಉದ್ದದ ಅತ್ಯಾಧುನಿಕ ಬುಂದೇಲ್‍ಖಂಡ್ ಎಕ್ಸ್‍ಪ್ರೆಸ್‍ವೇಯನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ಉದ್ಘಾಟಿಸುತ್ತಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬುಂದೇಲ್‍ಖಂಡ್ ಎಕ್ಸ್‍ಪ್ರೆಸ್‍ವೇ ಇಲ್ಲಿನ ಜನರಿಗಾಗಿ ಉದ್ಯೋಗದ ಆಯಾಮಗಳನ್ನು ತೆರೆಯುತ್ತದೆ ಮತ್ತು ಈಪ್ರದೇಶದ ಕೈಗಾರಿಕಾ ಅಭಿವೃದ್ಧಿಯಾಗಲಿದೆ,ಇದು ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ ಎಂದಿದ್ದಾರೆ. ಉದ್ಯೋಗದ ಜೊತೆಗೆ ಈ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಮತ್ತು ವ್ಯಾಪಾರದ ಅಭಿವೃದ್ಧಿಯ ಸಾಧ್ಯತೆಯನ್ನು ಸರ್ಕಾರ ಎದುರು ನೋಡುತ್ತಿದೆ ಎಂದು ಹೇಳಿದ್ದಾರೆ. 2020ರ ಫೆಬ್ರವರಿ ತಿಂಗಳಲ್ಲಿ […]