ಎಫ್‌ಎಂ ರೇನ್‌ಬೋ ಮುಚ್ಚುವ ಹುನ್ನಾರ ನಡೆಯುತ್ತಿದೆ : ಸುರೇಶ್ ಕುಮಾರ್

ಬೆಂಗಳೂರು: 31,  ಬೆಂಗಳೂರು ನಗರದ ಸಂಸ್ಕೃತಿಯ ಪ್ರತೀಕವಾಗಿರುವ, ವ್ಯಾಪಾರಿ ಮನೋಧರ್ಮವನ್ನು ಮೀರಿ ಅಪ್ಪಟ ಮನೋರಂಜನೆಗೆ ಹೆಸರಾದ ರೇನ್ ಬೋ 101.3 ಎಫ್ ಎಂ ಚಾನೆಲ್ ಅನ್ನು ಹಂತಹಂತವಾಗಿ ಮುಚ್ಚುವ ಹುನ್ನಾರ ದಕ್ಷಿಣ ವಲಯದ ಆಕಾಶವಾಣಿ ಮುಖ್ಯಸ್ಥರಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿರುವ ರಮಾಕಾಂತ್ ಅವರದ್ದಾಗಿದೆ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಆರೋಪಿಸಿದ್ದಾರೆ. ಈ ಅಧಿಕಾರಿಯ ಭಾಷಾಂಧತೆ ಹಾಗೂ ಸುದ್ದಿಮೂಲದ ಜವಾಬ್ದಾರಿಗಳನ್ನಷ್ಟೇ ಸೇವೆಯುದ್ದಕ್ಕೂ ನಿರ್ವಹಿಸಿ, ಮನೋರಂಜನೆಯ ಕುರಿತಂತೆ ಅವರು ಹೊಂದಿರುವ ಉಪೇಕ್ಷೆ  ಅವರ ಇಂತಹ ದುಷ್ಟ ಆಲೋಚನೆಗೆ ಮೂಲವಾಗಿದೆ […]