ಕಲ್ಪತರು ನಾಡಿಗೂ ಕಾಲಿಟ್ಟ ಧರ್ಮದಂಗಲ್

ತುಮಕೂರು,ಫೆ.2- ಗುಬ್ಬಿ ಶ್ರೀ ಚನ್ನಬಸವೇಶ್ವರ ಸ್ವಾಮಿ ಜಾತ್ರೆ ಮಹೋತ್ಸವ ಹಿನ್ನೆಲೆಯಲ್ಲಿ ಜಾತ್ರೆಯಲ್ಲಿ ಅನ್ಯಕೋಮಿನವರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಪರ ಸಂಘಟನೆಗಳು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದು, ಕರಾವಳಿಯಲ್ಲಿದ್ದ ಧರ್ಮದಂಗಲ್ ಕಲ್ಪತರು ನಾಡಿಗೆ ಕಾಲಿಟ್ಟಿದೆ. ಗುಬ್ಬಿಯಪ್ಪನ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಮುಜರಾಯಿ ವ್ಯಾಪ್ತಿಗೆ ಒಳಪಟ್ಟ ದೇವಸ್ಥಾನದಲ್ಲಿ ಕಾನೂನಿನಂತೆ ನೂರು ಮೀಟರ್ ವ್ಯಾಪ್ತಿಯೊಳಗೆ ಅನ್ಯ ಧರ್ಮೀಯರಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಮನವಿ ಮಾಡಿವೆ. ಫೆ.4ರಂದು ಘೋಷಿತ ಜೆಡಿಎಸ್ ಅಭ್ಯಥಿಗಳ […]

ಧರ್ಮ ದಂಗಲ್: ಪೊಲೀಸ್ ಭದ್ರತೆಯಲ್ಲಿ ಸುಬ್ರಮಣ್ಯಸ್ವಾಮಿ ರಥೋತ್ಸವ

ಬೆಂಗಳೂರು,ನ.29- ಧರ್ಮ ದಂಗಲ್ ಕಾರಣದಿಂದಾಗಿ ಇಂದು ನಡೆಯುತ್ತಿರುವ ವಿವಿ ಪುರಂ ಸುಬ್ರಮಣ್ಯ ಸ್ವಾಮಿ ರಥೋತ್ಸವಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಹಿಂದೂಗಳ ಧಾರ್ಮಿಕ ಆಚರಣೆ ಸಂದರ್ಭದಲ್ಲಿ ಅನ್ಯ ಧರ್ಮಿಯ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ಹಿಂದೂ ಪರ ಸಂಘಟನೆಗಳು ಆಗ್ರಹಿಸಿದ್ದ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‍ನಲ್ಲಿ ರಥೋತ್ಸವ ನೆರವೇರಿಸಲಾಯಿತು. ಇಂದಿನ ರಥೋತ್ಸವದ ಹಿನ್ನಲೆಯಲ್ಲಿ ಅನ್ಯ ಧರ್ಮಿಯರ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದ ಹಿಂದೂ ಪರ ಹೋರಾಟಗಾರರನ್ನು ತಡರಾತ್ರಿ ಪೊಲೀಸರು ಬಂಧಿಸಿ, […]

ಅಗರಬತ್ತಿ ಉದ್ಯಮಕ್ಕೆ ಪೂರಕ ಸಹಕಾರ : ಸಿಎಂ ಬೊಮ್ಮಾಯಿ

ಬೆಂಗಳೂರು, ನ.24- ಅಗರಬತ್ತಿ ಉದ್ಯಮಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ಸಹಕಾರ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅಖಿಲ ಭಾರತ ಅಗರಬತ್ತಿ ಉತ್ಪಾದಕರ ಸಂಘದ ವತಿಯಿಂದ ಇಂದು ಆಯೋಜಿಸಿದ್ದ ಐಮಾ ಎಕ್ಸ್‍ಪೋ- 2022 ಉದ್ಘಾಟಿಸಿ ಮಾತನಾಡಿದ ಅವರು, ಅಗರಬತ್ತಿ ಉದ್ಯಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಉದ್ಯೋಗ ನೀಡುವುದರಿಂದ ಹೆಚ್ಚಿನ ಅನುಕೂಲವಾಗುತ್ತದೆ ಎಂದರು. ಗ್ರಾಮೀಣ ಪ್ರದೇಶದಲ್ಲಿ ಈ ಉದ್ಯಮ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ರಾಜ್ಯ ಸರ್ಕಾರವು ಸಣ್ಣ ಪುಟ್ಟ ಸಮುದಾಯಗಳಾದ ಕುಂಬಾರ […]

ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ: ಸಚಿವ ಬಿ.ಸಿ ಪಾಟೀಲ್

ಬೆಂಗಳೂರು,ಅ.19- ರೈತರ ಸಿರಿಧಾನ್ಯ ಬೆಳೆಗಳಿಗೆ ಇನ್ನಷ್ಟು ಪ್ರೋತ್ಸಾಹ ನೀಡಿ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಜನವರಿ 20ರಿಂದ 22ರವರೆಗೆ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳವನ್ನು ಆಯೋಜಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕರ್ನಾಟಕ ಸಿರಿಧಾನ್ಯ ಬೆಳೆಯಲ್ಲಿ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಉತ್ಪಾದನೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ಇದರ ಮಾರುಕಟ್ಟೆ ವಿಸ್ತರಣೆ ರೈತರ ಬೆಳೆಗೆ ಸೂಕ್ತ ಬೆಲೆ ನೀಡುವುದು ಸೇರಿದಂತೆ ಮತ್ತಿತರ ಸದುದ್ದೇಶಕ್ಕಾಗಿ ಈ ಮೇಳವನ್ನು ಆಯೋಜಿಸಲಾಗಿದೆ ಎಂದರು. ಮೇಳಕ್ಕೆ […]