ನಕಲಿ ಕೀ ಬಳಸಿ- ಹ್ಯಾಂಡ್‍ಲಾಕ್ ಮುರಿದು ಕಳ್ಳತನ

ಬೆಂಗಳೂರು, ಡಿ.15- ದ್ವಿಚಕ್ರ ವಾಹನಗಳ ಹ್ಯಾಂಡ್ ಲಾಕ್ ಮುರಿದು ಹಾಗೂ ನಕಲಿ ಕೀ ಬಳಸಿ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿ ಐದು ಲಕ್ಷ ಬೆಲೆಬಾಳುವ ಹತ್ತು ದ್ವಿಚಕ್ರ ವಾಹನಗಳು ಹಾಗೂ ಮಾರುತಿ ಕಾರನ್ನು ವಶಪಡಿಸಿಕೊಂಡಿದ್ದಾರೆ. ನಗರದ ನಿವಾಸಿಗಳಾದ ಶ್ರೀನಿವಾಸ್ ಅಲಿಯಾಸ್ ಎಕ್ಸ್‍ಎಲ್ ಸೀನ(22) ಮತ್ತು ಸೈಯದ್ ವಾಸೀಮ್ ಅಕ್ರಂ(23) ಬಂಧಿತ ಆರೋಪಿಗಳು. ಈ ಇಬ್ಬರು ಪಾರ್ಕಿಂಗ್ ಸ್ಥಳಗಳಲ್ಲಿ ಹಾಗೂ ಮನೆ ಮುಂದೆ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳನ್ನು ನಕಲಿ ಕೀ ಬಳಸಿ ಕಳ್ಳತನ ಮಾಡುತ್ತಿದ್ದರಲ್ಲದೆ, […]