ಹತ್ಯೆಯಾದವರ ಮನೆಗಳಿಗೆ ಎಚ್‍ಡಿಕೆ ಭೇಟಿ, ತಲಾ 5 ಲಕ್ಷ ಪರಿಹಾರದ ಚೆಕ್ ಹಸ್ತಾಂತರ

ಮಂಗಳೂರು,ಆ.1- ದಕ್ಷಿಣ ಕನ್ನಡ ಜಿಲ್ಲೇಯ ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು, ಮಸೂದ್ ಹಾಗೂ ಫಾಜಿಲ್ ಅವರ ಮನೆಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ದುಃಖತಪ್ತ ಎರಡೂ ಕುಟುಂಬಗಳಿಗೆ ಸಾಂತ್ವನ ಹೇಳಿ ಪರಿಹಾರ ಧನದ ಚೆಕ್ ಹಸ್ತಾಂತರಿಸಿದರು. ಇಂದು ಬೆಳಗ್ಗೆಯೇ ಮಂಗಳೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಅವರ ಮನೆಗೆ ಬಂದು ಪತ್ನಿ ನೂತನ ಹಾಗೂ ತಂದೆ-ತಾಯಿಗೆ ಸಾಂತ್ವನ ಹೇಳಿ ಯಾವುದೇ ಕಾರಣಕ್ಕೂ ಎದೆಗುಂದಬೇಡಿ. […]