ರೈತರಿಗಾಗಿ ಮೇಕೆದಾಟು ಹೋರಾಟ: ಡಿಕೆಶಿ

ಮೈಸೂರು,ಜ.3- ರಾಜ್ಯದ ಹಿತಕ್ಕೋಸ್ಕರ, ಜನರ ಕುಡಿಯುವ ನೀರಿಗೋಸ್ಕರ, ಕಾವೇರಿ ಜಲಾನಯನ ಪ್ರದೇಶದ ರೈತರಿಗಾಗಿ ಹೋರಾಟ ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಇಂದು ಮುಂಜಾನೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಭಕಾರ್ಯ ನಡೆಸುವ ಮೊದಲು ದೇವರಿಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಮೇಕೆದಾಟು ಪಾದಯಾತ್ರೆಗೂ ಮುನ್ನ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದಿದ್ದೇವೆ ಎಂದರು. ಮೈಸೂರು ಜಿಲ್ಲೆ, ಚಾಮರಾಜನಗರ ಕೂಡ ಮೈಸೂರು ಜಿಲ್ಲೆಯ […]