ಫೆ.10ರಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ

ಬೆಂಗಳೂರು, ಜ.25- ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಫೆ.10ರಿಂದ ಪ್ರಾರಂಭವಾಗಲಿದೆ. ಅಂದು ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಸಭಾಂಗಣದಲ್ಲಿ ಜಂಟಿ ಅಧಿವೇಶನ ಪ್ರಾರಂಭವಾಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಭಯ ಸದನಗಳ ಸದಸ್ಯರನ್ನುದೇಶಿಸಿ ಭಾಷಣ ಮಾಡಲಿದ್ದಾರೆ. ಈ ವರ್ಷದ ಮೊದಲ ಅಧಿವೇಶನ ಇದಾಗಿದೆ. 15ನೇ ವಿಧಾನಸಭೆಯ 15ನೇ ಅಧಿವೇಶನವಾಗಿದ್ದು, ಇದು ಪ್ರಸಕ್ತ ವಿಧಾನಸಭೆಯ ಕೊನೆಯ ಅಧಿವೇಶನ ಕೂಡ ಆಗಲಿದೆ. ಅಧಿವೇಶನ ಮುಗಿದ ಬಳಿಕ 16ನೇ ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳು ಪ್ರಾರಂಭವಾಗಲಿರುವುದರಿಂದ ಮತ್ತೆ […]