ಭಾರತದಲ್ಲಿ ನಡೆಯುವ IMF ದುಂಡು ಮೇಜಿನ ಸಭೆಗೆ ಚೀನಾ ಹಣಕಾಸು ಸಚಿವರು

ನವದೆಹಲಿ,ಫೆ.6-ಇದೇ ತಿಂಗಳು ಭಾರತದಲ್ಲಿ ನಡೆಯಲಿರುವ ಸಾಲದಾತರು ಮತ್ತು ಸಾಲ ಪಡೆಯುವ ದೇಶಗಳ ದುಂಡು ಮೇಜಿನ ಸಭೆಯಲ್ಲಿ ಚೀನಾ ಹಣಕಾಸು ಸಚಿವ ಹಾಗೂ ಅಲ್ಲಿನ ಸೆಂಟ್ರಲ್ ಬ್ಯಾಂಕ್ ಗವರ್ನರ್ ಪಾಲ್ಗೊಳ್ಳುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ(ಐಎಂಎಫ್) ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ತಿಳಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಈ ವಿಷಯ ಖಚಿತಪಡಿಸಿರುವ ಅವರು, ಕಡಿಮೆ ಆದಾಯದ ದೇಶಗಳು ಸಾಲ ಪಾವತಿಸಲು ಸಾಧ್ಯವಾಗದ ಕಾರಣ ಚೀನಾ ತನ್ನ ಕೆಲವು ನೀತಿಗಳನ್ನು ಬದಲಾಯಿಸಿಕೊಳ್ಳಬೇಕಾಗಿದೆ ಎಂದು ಅವರು ಸಲಹೆ ನೀಡಿದ್ದಾರೆ. ಟರ್ಕಿ, […]

ಧಾರವಾಡ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ನಿರ್ಮಲಾ

ಧಾರವಾಡ,ಫೆ.1-ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 5ನೇ ಬಜೆಟ್ ಮಂಡನೆಗಾಗಿ ಇಂದು ಸಂಸತ್ತಿಗೆ ಆಗಮಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮೆರೂನ್ ಕಲರ್) ಬಣ್ಣದ ಸೀರೆಯುಟ್ಟು ಬಂದಿದ್ದು ವಿಶೇಷ. ಈ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು ನಮ್ಮ ಧಾರವಾಡ ನಗರದ ನಾರಾಯಣಪುರದಲ್ಲಿ ಇರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಫ್ಟ್‍ನ ಮಹಿಳಾಮಣಿಗಳು ಅನ್ನುವುದು ಇನ್ನೂ ವಿಶೇಷ.ಜಿಲ್ಲೆಯ ಸಂಸದರು, ಕೇಂದ್ರ ಸಚಿವರು ಆಗಿರುವ ಪ್ರಲ್ಹಾದ ಜೋಶಿ ಅವರು ನವಲಗುಂದ ಕಸೂತಿ […]