ಕಾಂಗ್ರೆಸ್‍ಗೆ ಮತ ಹಾಕಿ ವ್ಯರ್ಥ ಮಾಡಬೇಡಿ : ಅರವಿಂದ್ ಕೇಜ್ರಿವಾಲ್
ಅಹಮದಾಬಾದ್.ಸೆ.13- ಎಲ್ಲಿಯೂ ಇಲ್ಲದ ಪಕ್ಷ ಕಾಂಗ್ರೆಸ್‍ಗೆ ಜನರು ತಮ್ಮ ಮತ ಹಾಕಿ ವ್ಯರ್ಥ ಮಾಡಬೇಡಿ ,ಕಾಂಗ್ರೆಸ್ ಅಂತ್ಯವಾಗಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಇಂದಿಲ್ಲಿ ಹೇಳಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಇಲ್ಲಿಗೆ ಭೇಟಿ ನೀಡಿರುವ ಕೇಜ್ರಿವಾಲ್ ಇಂದು ಪೌರ ಕಾರ್ಮಿಕರೊಂದಿಗೆ ನಡೆದ ಸಭೆ ನಂತರ ಸುದ್ದಿಗೋಷ್ಠಯಲ್ಲಿ ಮಾತನಾಡಿದರು. ಪಂಜಾಬ್‍ನ ಎಎಪಿ ಸರ್ಕಾರವು ದಿವಾಳಿತನದ ಅಂಚಿನಲ್ಲಿದ್ದರೂ ಮತ್ತು ಸರ್ಕಾರಿ ನೌಕರರಿಗೆ ಸಂಬಳಕ್ಕೂ ಹಣವಿಲ್ಲದಿದ್ದರೂ ಗುಜರಾತ್‍ನಲ್ಲಿ […]