ಬೆಂಗಳೂರಿನ ಹೋಟೆಲ್‍ವೊಂದರಲ್ಲಿ ಬೆಂಕಿ ಅವಘಡ

ಬೆಂಗಳೂರು,ಮಾ.9- ಹೋಟೆಲ್‍ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಸಿತ್ತು. ಗಾಂಧಿನಗರದ ಸಪ್ನ ಬುಕ್ ಹೌಸ್ ಸಮೀಪದ ಹೋಟೆಲ್‍ವೊಂದರಲ್ಲಿ ಇಂದು ಮಧ್ಯಾಹ್ನ 2.25ರಲ್ಲಿ ಬೆಂಕಿ ಕಾಣಿಸಿಕೊಂಡಿದೆ.ತಕ್ಷಣ ಹೋಟೆಲ್ ಸಿಬ್ಬಂದಿ ಹಾಗೂ ಗ್ರಾಹಕರು ಹೊರಗೆ ಬಂದು ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಎರಡು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆಕಸ್ಮಿಕ ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.