ಡಿಕೆಶಿ, ಸಿದ್ದರಾಮಯ್ಯ ಸೇರಿ 30 ಮಂದಿ ವಿರುದ್ಧ ಎಫ್‍ಐಆರ್ ದಾಖಲು

ರಾಮನಗರ,ಜ.10- ವೀಕೆಂಡ್ ಕಫ್ರ್ಯೂ ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಒಟ್ಟು 30 ಮಂದಿ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ರಾಮನಗರ ಜಿಲ್ಲೆ ಸಾತನೂರು ಪೊಲೀಸ್ ಠಾಣೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ 30 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಸರ್ಕಾರದ ಕಾನೂನು ಉಲ್ಲಂಘನೆ ಮತ್ತು ಕೋವಿಡ್ ಮಾರ್ಗಸೂಚನೆಯನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಸಾತನೂರು […]