ಬೆಂಗಳೂರಿನ ಮೀನು ಪ್ರಿಯರಿಗೆ ಸರ್ಕಾರದಿಂದ ಸಿಹಿಸುದ್ದಿ

ಬೆಂಗಳೂರು,ಅ.16- ರಾಜಧಾನಿ ಬೆಂಗಳೂರಿನಲ್ಲಿ ಸಾಕಷ್ಟು ಮೀನಿನ ಬೇಡಿಕೆ ಇರುವುದರಿಂದ ಬಿಬಿಎಂಪಿ ವ್ಯಾಪ್ತಿಯ ಎಲ್ಲ ವಾರ್ಡ್‍ಗಳಲ್ಲಿ ಮೀನು ಮಾರಾಟ ಮಾಡುವ ಮಳಿಗೆಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಬಂದರು ಮತ್ತು ಮೀನುಗಾರಿಕೆ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಒಳನಾಡು ಮೀನುಗಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಬಿಎಂಪಿಯ ಎಲ್ಲಾ ವಾರ್ಡ್‍ಗಳಲ್ಲಿ ಮೀನು ಮಾರಾಟ ಮಾಡುವ ಮಳಿಗೆಗಳನ್ನು ಪ್ರಾರಂಭ ಮಾಡುವುದರಿಂದ ಈ ಉದ್ಯೋಗಕ್ಕೆ ಹೆಚ್ಚಿನ ಪ್ರೋತ್ಸಾಹ ಸಿಗಲಿದೆ ಎಂದು ಅಭಿಪ್ರಾಯಪಟ್ಟರು. ಖಾಸಗಿಯವರು ಮಳಿಗೆ ಪ್ರಾರಂಭಿಸಲು […]