ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ಸಂಪುಟದಲ್ಲಿ ಬದಲಾವಣೆ ಇಲ್ಲ

ಬೆಂಗಳೂರು,ಜ.24-ಶಾಸಕರ ಒತ್ತಡಕ್ಕೆ ಬಿಲ್‍ಕುಲ್ ಕ್ಯಾರೆ ಎನ್ನದ ಕೇಂದ್ರ ಬಿಜೆಪಿ ವರಿಷ್ಠರು ಪಂಚರಾಜ್ಯಗಳ ವಿಧಾನಸಭೆ ಫಲಿತಾಂಶ ಹಾಗೂ ಸರ್ಕಾರ ರಚನೆ ಪ್ರಕ್ರಿಯೆ ಮುಗಿಯುವವರೆಗೂ ಬಹುನಿರೀಕ್ಷಿತ ಸಚಿವ ಸಂಪುಟ ಪುನಾರಚನೆ ಇಲ್ಲವೇ ವಿಸ್ತರಣೆಗೆ ಕೈ ಹಾಕದಿರಲು ತೀರ್ಮಾನಿಸಿದೆ. ಚುನಾವಣಾ ವರ್ಷ ಆಗಿರುವುದರಿಂದ ಖಾಲಿ ಇರುವ ನಾಲ್ಕು ಸ್ಥಾನಗಳ ಜೊತೆಗೆ ಕೆಲವು ಅದಕ್ಷ ಸಚಿವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲು ಸಂಪುಟ ಪುನಾರಚನೆ ನಡೆಯಬೇಕೆಂಬುದು ಬಹುತೇಕರ ಬೇಡಿಕೆಯಾಗಿತ್ತು. ಇತ್ತೀಚೆಗಷ್ಟೇ ಶಾಸಕರಾದ ಬಸವನಗೌಡ ಪಾಟೀಲ್‍ಯತ್ನಾಳ್, ಎಂ.ಪಿ.ರೇಣುಕಾಚಾರ್ಯ ಹಾಗೂ ನಿನ್ನೆಯಷ್ಟೇ ಸಚಿವ ಉಮೇಶ್ […]