ಸಂಪುಟ ಪುನಾರಚನೆಗೆ ಸದ್ಯಕ್ಕೆ ಬ್ರೇಕ್, ಆಕಾಂಕ್ಷಿಗಳಿಗೆ ನಿರಾಸೆ..!

ಬೆಂಗಳೂರು,ಜ.17- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರಲು ಕಾತರದಿಂದ ಕಾಯುತ್ತಿದ್ದ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೊಮ್ಮೆ ನಿರಾಶೆಯಾಗಿದೆ. ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆ, ಪುನಾರಚನೆಗೆ ಚಿಂತನೆ ನಡೆಸಿದ್ದ ವರಿಷ್ಠರು, ಇದೀಗ ಪಂಚರಾಜ್ಯಗಳ ಚುನಾವಣೆಯತ್ತ ಗಮನ ಹರಿಸಿರುವುದರಿಂದ ಬಹುತೇಕ ರಾಜ್ಯ ಬಜೆಟ್ ಮಂಡನೆಯಾಗುವವರೆಗೂ ಕಾಯುವ ಅನಿವಾರ್ಯತೆ ಎದುರಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾದ ನಂತರ ಬೊಮ್ಮಾಯಿ ಸಂಪುಟದಲ್ಲಿ ಮೇಜರ್ ಸರ್ಜರಿ ಮಾಡಿ, ಚುನಾವಣಾ ಸಂಪುಟ ರಚನೆಗೆ ನಡೆಸಲಾಗಿದ್ದ ಚಿಂತನೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ರಾಜ್ಯ ಬಿಜೆಪಿ ಘಟಕ ಹಾಗೂ ಸಂಘ […]