ಕನ್ನಡ ಬಾವುಟ ಹಾರಿಸಿದ ಯುವಕನಿಗೆ ಪೊಲೀಸ್ ಥಳಿತ : ತನಿಖೆಗೆ ಸಿಎಂ ಸೂಚನೆ

ಹುಬ್ಬಳ್ಳಿ,ಡಿ.2- ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವಕನೊಬ್ಬ ಕನ್ನಡ ಬಾವುಟ ಹಾರಿಸಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ದೂರು ಕೊಡಲು ಬಂದಿದ್ದ ಯುವಕನ ಮೆಲೆಯೇ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬ ಆರೋಪವಿದೆ. ಈಗಾಗಲೇ ನಾನು ಬೆಳಗಾವಿ ನಗರ ಪೊಲೀಸ್ ಆಯುಕ್ತರ ಜೊತೆ ಮಾತನಾಡಿದ್ದೇನೆ. ತನಿಖೆಗೆ ಸೂಚಿಸಿದ್ದೇನೆ. ಒಂದು ವೇಳೆ ಪೊಲೀಸರು ಯುವಕನ ಮೇಲೆ […]

ಕನ್ನಡ ಧ್ವಜ ಹಾರಿಸಿದ ವಿದ್ಯಾರ್ಥಿಗೆ ಮರಾಠಿ ಪುಂಡರಿಂದ ಹಲ್ಲೆ

ಬೆಳಗಾವಿ,ಡಿ.2- ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ಕೆಲವು ದುಷ್ಕರ್ಮಿಗಳು ಥಳಿಸಿರುವ ಘಟನೆ ಟಿಳಕವಾಡಿಯ ಕಾಲೇಜೊಂದರಲ್ಲಿ ನಡೆದಿದ್ದು, ಭಾಷಾ ವಿವಾದವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ನಗರದ ಟೀಲಕವಾಡಿ ಗೋಗಟೆ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಕಾರ್ಯಕ್ರಮದ ಸಂದರ್ಭದಲ್ಲಿ ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ಥಳಿಸಲಾಗಿದೆ. ಇದರಿಂದಾಗಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಶಿಕ್ಷಕರು ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸುದ್ದಿ ತಿಳಿದ ಡಿಸಿಪಿ ರವೀಂದ್ರ ಗಡಾದಿ ಮತ್ತು ಇತರ ಅಕಾರಿಗಳು […]

ನ.1ರಂದು ಮನೆಗಳ ಮೇಲೆ ಕನ್ನಡ ಧ್ವಜ ಹಾರಿಸಲು ಜೆಡಿಎಸ್ ಕರೆ

ಬೆಂಗಳೂರು, ಅ.29- ಪ್ರಧಾನಿ ನರೇಂದ್ರ ಮೋದಿಯವರು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ರಮದಲ್ಲಿ ಮನೆ-ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಕರೆ ನೀಡಿದ್ದ ಮಾದರಿಯಲ್ಲೇ ಜೆಡಿಎಸ್ ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 1ರಂದು ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲು ಕರೆ ನೀಡಿದೆ. ರಾಜ್ಯದ ಪ್ರತಿ ಮನೆಯ ಮೇಲೂ ಕನ್ನಡದ ಬಾವುಟ ಹಾರಿಸಲು ಕನ್ನಡಿಗರಲ್ಲಿ ಮನವಿ ಮಾಡಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಮುಂಬರುವ ವಿಧಾನ ಸಭೆ ಚುನಾವಣೆಯ ಪಕ್ಷದ ಸಂಭವನೀಯ ಅಭ್ಯರ್ಥಿಯು ಕನ್ನಡ ಬಾವುಟವನ್ನು ಮನೆಯ ಮೇಲೆ ಹಾರಿಸುವ ಅಭಿಯಾನವನ್ನು […]

ಲಿಮ್ಕಾ ದಾಖಲೆ ಬರೆದ ಬೃಹತ್ ತ್ರಿವರ್ಣ ಧ್ವಜ

ಕೋಲಾರ, ಆ.16- ಸ್ವಾತಂತ್ರ್ಯದ 75 ಸಂವತ್ಸರಗಳನ್ನು ಪೂರೈಸಿದ ಸಂಭ್ರಮದಲ್ಲಿ ಜಿಲ್ಲೆಯಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸಿ ಲಿಮ್ಕಾ ಪುಸ್ತಕದಲ್ಲಿ ದಾಖಲೆ ನಿರ್ಮಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೋಲಾರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಹರ್ ಘರ್ ತಿರಂಗಾ ಅಭಿಯಾನದ ಕರೆಗೆ ಓಗೊಟ್ಟು ಸಂಸದ ಎಸ್.ಮುನಿಸ್ವಾಮಿ ಅವರ ನೇತೃತ್ವದಲ್ಲಿ ದೇಶದ ಅತಿ ದೊಡ್ಡ ರಾಷ್ಟ್ರಧ್ವಜವನ್ನು ಕ್ರೀಡಾಂಗಣದ ಉದ್ದಗಲಕ್ಕೂ ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ರಕ್ಷಣಾ ಇಲಾಖೆಯ ಸೇನಾ ಹೆಲಿಕಾಪ್ಟರ್‍ನಿಂದ ಪುಷ್ಪವೃಷ್ಟಿ ಸಲ್ಲಿಸಲಾಯಿತು.ಆ ಕ್ಷಣದಲ್ಲಿ ಕ್ರೀಡಾಂಗಣದಲ್ಲಿ […]

ಮಲ್ಲೇಶ್ವರಂನಲ್ಲಿ ಗಂಧರ್ವಲೋಕ ಸೃಷ್ಟಿ : ನಡುರಾತ್ರಿ ಸಿಎಂ ಧ್ವಜಾರೋಹಣ

ಬೆಂಗಳೂರು, ಆ.15- ವೇದಿಕೆಯ ಮೇಲೆಲ್ಲ ತಿರಂಗದ ಝಗಮಗ ಬಣ್ಣಗಳ ಬಳುಕು, ಸಭಾಂಗಣದಲ್ಲಿ ನೆರೆದಿದ್ದವರ ಕೈಯಲ್ಲಿ ಅರಳಿದ್ದ ರಾಷ್ಟ್ರಧ್ವಜಗಳು, ಶಾಸ್ತ್ರೀಯ ನೃತ್ಯ ಮತ್ತು ಸಂಗೀತಗಳ ಹದವಾದ ಸಮ್ಮಿಲನದಲ್ಲಿ ತಾಯಿ ಭಾರತಾಂಬೆಯ ಸ್ತುತಿ, ಬಳಿಕ ಸಮಕಾಲೀನ ಚಿತ್ರಗೀತೆಗಳ ಮೂಲಕ ಜನರಲ್ಲಿ ಉತ್ಸಾಹದ ಅಲೆ ಎಬ್ಬಿಸಿದ ಹೆಸರಾಂತ ಗಾಯಕಿ ಮಂಗ್ಲಿ (ಸತ್ಯವತಿ) ಮತ್ತು ಅವರ ತಂಗಿ ಇಂದಿರಾವತಿ, ಇವೆಲ್ಲಕ್ಕೆ ಕಳಶವಿಟ್ಟಂತೆ ನಟ್ಟ ನಡುರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಧ್ವಜಾರೋಹಣ ಮಾಡಿದರು. ಇವು ಡಾ.ಸಿ ಎನ್ ಅಶ್ವತ್ಥ […]

ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಯೋಧ ಸಾವು

ಕಡಬ,ಆ.15- ಧ್ವಜಾರೋಹಣ ಸಂದರ್ಭದಲ್ಲಿ ನಿವೃತ್ತ ಯೋಧ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲ್ಲೂಕಿನ ಕುಟ್ರುಪಾಡಿ ಗ್ರಾಮದ ಹಳೇ ಸ್ಟೇಷನ್ ಅಮೃತಸರೋವರದ ಬಳಿ ಇಂದು ಬೆಳಗ್ಗೆ 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಸಂದರ್ಭದಲ್ಲಿ ಏಕಾಏಕಿ ನಿವೃತ್ತಯೋಧ ಗಂಗಾಧರ ಗೌಡ ಎಂಬುವರು ಕುಸಿದು ಬಿದ್ದರು. ಸ್ಥಳದಲ್ಲಿದ್ದವರು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ನಿವೃತ್ತ ಯೋಧ ಗಂಗಾಧರ ಗೌಡ ಅವರ ನಿಧನದಿಂದ ಕುಟ್ರುಪಾಡಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

13 ಸಾವಿರ ಮೀಟರ್ ಬಟ್ಟೆಯ ಬೃಹತ್ ರಾಷ್ಟ್ರಧ್ವಜ

ಕೋಲಾರ,ಆ.15-ದೇಶಕ್ಕೆ ಸ್ವಾತಂತ್ರ್ಯ ಬಂದು 75 ಸಂವತ್ಸರ ಕಳೆದು ಅಮೃತ ಮಹೋತ್ಸವ ಆಚರಿಸುತ್ತಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಜನತೆಯೊಂದಿಗೆ ಸರ್ಕಾರ ಸದಾ ಇರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿದರು.ನಗರದ ಸರ್ ಎಂ.ವಿ.ಕ್ರೀಡಾಂಗಣದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಪಥ ಸಂಚಲನದ ವಂದನೆ ಸ್ವೀಕರಿಸಿ ಜನತೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ದೇಶವನ್ನು ಪರಕೀಯರ ಆಳ್ವಿಕೆಯಿಂದ ತಪ್ಪಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ಸ್ಮರಿಸಿ ಶುಭಾಶಯ ಕೋರಿದರು. ಜಿಲ್ಲೆಯ ಕೃಷಿ, ಪಶುಸಂಗೋಪನೆ, ರೇಷ್ಮೆ ಉದ್ಯಮವನ್ನೇ ನಂಬಿದ್ದ ಜನತೆಯು ಇದೀಗ ಕೈಗಾರಿಕೆಗಳಿಗೆ […]

ಕೆಂಪುಕೋಟೆ ಮೇಲೆ ಪ್ರಧಾನಿ ಧ್ವಜಾರೋಹಣ, ಇಲ್ಲಿದೆ ಮೋದಿ ಭಾಷಣದ ಹೈಲೈಟ್ಸ್

ನವದೆಹಲಿ, ಆ.15- ಭ್ರಷ್ಟಾಚಾರ, ಸ್ವಜನಪಕ್ಷಪಾತ ದೇಶದ ಶತ್ರುಗಳಾಗಿದ್ದು, ಇವುಗಳನ್ನು ತೊಡೆದು ಹಾಕಲು ಮಹತ್ವದ ಬದಲಾವಣೆಯೊಂದಿಗೆ ಹೋರಾಟಕ್ಕಿಳಿಯಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯ ಕೆಂಪುಕೋಟೆ ಮೇಲೆ ರಾಷ್ಟ್ರದ ಹೆಮ್ಮೆಯ ಸಂಕೇತವಾದ ತ್ರೀವರ್ಣ ಧ್ವಜಾರೋಹಣ ನೆರವೇರಿಸಿದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಬಡತನದ ವಿರುದ್ಧ ಜಯ ಗಳಿಸಬೇಕಾದರೆ ನಾವು ಮೊದಲು ಸಮಸ್ಯೆಗಳನ್ನು ಹತ್ತಿಕ್ಕಬೇಕು ಎಂದರು. ಆತ್ಮನಿರ್ಭರ ಭಾರತ, ನಾರಿ ಶಕ್ತಿ, ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿ, ಕಪ್ಪು ಹಣ, ಡಿಜಿಟಲ್ ಕ್ರಾಂತಿ, ಸ್ವಾವಲಂಬನೆ, ಕೋವಿಡ್ ಸೇರಿದಂತೆ […]