ರಾಜ್ಯದಲ್ಲಿ ತಗ್ಗಿದ ವರುಣನ ಆರ್ಭಟ

ಬೆಂಗಳೂರು,ಜು.19- ರಾಜ್ಯದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದರೂ ನದಿಗಳ ಪ್ರವಾಹ ಮಾತ್ರ ನಿಂತಿಲ್ಲ. ಕಳೆದ ಮೂರು ವಾರಗಳಿಂದ ಆರ್ಭಟಿಸುತ್ತಿದ್ದ ಮುಂಗಾರು ಮಳೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ತುಸು ಕಡಿಮೆಯಾಗಿದೆ. ಉಳಿದಂತೆ ರಾಜ್ಯದ ಒಳನಾಡಿನಲ್ಲಿ ಹಗುರ ಮಳೆಯಾದ ವರದಿಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಕಲ್ಯಾಣ ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾದ ವರದಿಯಾಗಿಲ್ಲ. ಆದರೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಸಾಧಾರಣ ಪ್ರಮಾಣದ ಮಳೆ ಮುಂದುವರೆದಿದೆ. ನಿರಂತರವಾಗಿ ಈ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ನದಿಗಳ ಪ್ರವಾಹ ಮುಂದುವರೆದಿದೆ. ಜಲಾಶಯಗಳ […]