ಬೆಂಗಳೂರು ಸಂಚಾರ ದಟ್ಟಣೆಗೆ ನಿಯಂತ್ರಣಕ್ಕೆ ಬಿಬಿಎಂಪಿ ಮಹತ್ವದ ನಿರ್ಣಯ

ಬೆಂಗಳೂರು,ಮಾ.2-ಬೆಂಗಳೂರಿನ ಹೃದಯ ಭಾಗದಲ್ಲಿ ಜನ ಸಾಮಾನ್ಯರನ್ನು ಕಾಡುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳಲು ಬಿಬಿಎಂಪಿ ಮಹತ್ವದ ನಿರ್ಣಯ ಕೈಗೊಂಡಿದ್ದು, ಪ್ರಮುಖ ಸ್ಥಳಗಳಲ್ಲಿ ಮೇಲು ಸೇತುವೆ ಹಾಗೂ ಕೆಳ ಸೇತುವೆಗಳ ಮೂಲಕ ಸಿಗ್ನಲ್‍ಫ್ರೀ ಕಾರಿಕಾಡಾರ್ ನಿರ್ಮಾಣವನ್ನು ಪ್ರಸ್ತಾಪಿಸಲಾಗಿದೆ. ಬೆಂಗಳೂರು ನಗರದಲ್ಲಿ 42 ಮೇಲ್ಸೇತುವೆ ಮತ್ತು 28 ಕೆಳಸೇತುವೆಗಳಿದ್ದು ಈ ವರ್ಷದಲ್ಲಿ ಮತ್ತೆ ನಾಲ್ಕು ಮೇಲ್ಸೇತುವೆಗಳು ಮತ್ತು ನಾಲ್ಕು ಕೆಳಸೇತುವೆಗಳು ಸೇರ್ಪಡೆಯಾಗಬಹುದಾಗಿದ್ದು, ಪಾದಚಾರಿ ಸುರಂಗ ಮಾರ್ಗ ಸೇರಿದಂತೆ ಈ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ವಹಣಗೆ 20 ಕೋಟಿ ರೂಗಳನ್ನು ಮೀಸಲಿರಿಸಲಾಗಿದೆ. […]

ಪೀಣ್ಯ ಎಲಿವೇಟೆಡ್ ಕಾಮಗಾರಿ 3 ತಿಂಗಳಲ್ಲಿ ಪೂರ್ಣ

ಬೆಂಗಳೂರು,ಸೆ.20- ಬೆಂಗಳೂರು-ಮುಂಬೈ ಸಂಪರ್ಕಿಸುವ ಪೀಣ್ಯ ಎಲಿವೆಟೆಡ್ ಕಾಮಾಗಾರಿ ಡಿಸೆಂಬರ್ ತಿಂಗಳಿಗೆ ಪೂರ್ಣಗೊಳ್ಳಲಿದ್ದು ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಳೆದ ವಾರ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಬಂದಾಗ ನಾನು ಈ ವಿಷಯವನ್ನು ಪ್ರಸ್ತಾಪಿಸಿ ತುರ್ತಾಗಿ ಈ ಕಾಮಗಾರಿಯನ್ನು ಮುಗಿಸಿಕೊಡಲು ಮನವಿ ಮಾಡಿದ್ದೆ. ಫ್ಲೈಓವರ್ ಮೇಲೆ ನಡೆಸಲು ಉದ್ದೇಶಿಸಿರುವ ಕಾಮಗಾರಿಗಳ ಪ್ರಸ್ತಾವನೆಯನ್ನು ಸಿದ್ದಪಡಿಸಿ ನಮ್ಮ ಇಲಾಖೆಗೆ ಸಲ್ಲಿಸಿದರೆ ಆದಷ್ಟು ಶೀಘ್ರ ಹಣ ಬಿಡುಗಡೆ ಮಾಡುತ್ತೇನೆ ಎಂದಿದ್ದಾರೆ. ಈಗಾಗಲೇ ಅಧಿಕಾರಿಗಳು ಪತ್ರ […]