ಎಫ್‍ಎಂ ರೇನ್‍ಬೋ ಉಳಿಸಲು ಹೆಚ್‌ಡಿಕೆ ಒತ್ತಾಯ

ಬೆಂಗಳೂರು, ಜ.28- ಸಂಸದರೆಲ್ಲರೂ ದನಿಯೆತ್ತಿ ಎಫ್‍ಎಂ ರೇನ್ ಬೋ ಕನ್ನಡ ಕಾಮನಬಿಲ್ಲು ರೇಡಿಯೋ ವಾಹಿನಿಯನ್ನು ಉಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ  ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ರೇಡಿಯೋ ಮುಚ್ಚುವುದು ಅಥವಾ ಇನ್ನೊಂದರಲ್ಲಿ ವಿಲೀನ ಮಾಡುವುದನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕøತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರ್ಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಎದೆ […]