ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ, ಪ್ರವಾಹ ಭೀತಿ

ಬೆಂಗಳೂರು,ಆ.5- ಮಳೆಯ ಅಬ್ಬರ ಮುಂದುವರೆದಿದ್ದು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಕಳೆ ದೊಂದು ವಾರದಲ್ಲಿ ರಾಜ್ಯದ ಒಳನಾಡಿನಲ್ಲಿ ಶೇ.500ರಷ್ಟು ಅಧಿಕ ಮಳೆಯಾಗಿ ದಾಖಲೆ ನಿರ್ಮಿಸಿದೆ. ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದ್ದು, ಕರಾವಳಿ ಮತ್ತು ಮಲೆನಾಡು ಹೊರತುಪಡಿಸಿದರೆ ಉಳಿದೆಡೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಿದ್ದು, ಹಲವು ಅನಾಹುತಗಳನ್ನು ಸೃಷ್ಟಿಸಿದೆ. ನದಿ, ಹಳ್ಳಕೊಳ್ಳಗಳು ತುಂಬಿ ಹರಿದಿದ್ದು, ಹೊಲಗದ್ದೆಗಳು ಜಲಾವೃತಗೊಂಡು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಕಾವೇರಿ ಕೊಳ್ಳದಲ್ಲಿ ಅಕ ಮಳೆಯಿಂದ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಮಂಡ್ಯ […]