ಲಕ್ಕಿಂಪುರ್ ಪ್ರಕರಣ: 5 ಸಾವಿರ ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಕೆ

ಲಕ್ಕಿಂಪುರ್‍ಖೇರಿ, ಜ.3- ಪ್ರತಿಭಟನಾ ನಿರತ ರೈತರ ಮೇಲೆ ವಾಹನ ಹರಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಿರುವ ಉತ್ತರ ಪ್ರದೇಶ ಪೊಲೀಸರು, ಕೇಂದ್ರದ ಗೃಹಖಾತೆ ರಾಜ್ಯ ಸಚಿವರ ಪುತ್ರನನ್ನು ಸೇರಿದಂತೆ ಹಲವು ಆರೋಪಿಗಳನ್ನು ಗುರುತಿಸುವ 5 ಸಾವಿರ ಪುಟಗಳ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟ್ಟಿದ್ದ ಮೂರು ವಿವಾದಿತ ಕೃಷಿ ಕಾಯಿದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಲಕ್ಕಿಂಪುರ್‍ನಲ್ಲಿ ರೈತರು ಅ.3ರಂದು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ರೈತರ ಮೇಲೆ ಕೇಂದ್ರ ಗೃಹಖಾತೆ […]