ಮಚ್ಚು ಹಿಡಿದು ರಸ್ತೆಯಲ್ಲಿ ಓಡಾಡುತ್ತಿದ್ದ ವಿದೇಶಿ ಪ್ರಜೆ ಬಂಧನ
ಬೆಂಗಳೂರು,ಫೆ.7- ರಸ್ತೆಯಲ್ಲಿ ಮಚ್ಚು ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಿದ್ದ ವಿದೇಶಿ ಪ್ರಜೆಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಠಾಣೆ ಮುಂಭಾಗದ ಮುಖ್ಯರಸ್ತೆಯಲ್ಲಿ ನಿನ್ನೆ ಸಂಜೆ 4.30ರ ಸುಮಾರಿನಲ್ಲಿ ಐವರಿ ಕೋಸ್ಟ್ ಪ್ರಜೆ ಮಚ್ಚು ಹಿಡಿದು ಓಡಾಡುತ್ತಾ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುತ್ತಾ ಸಾರ್ವಜನಿಕರನ್ನು ಬೆದರಿಸುತ್ತಿದ್ದನು. ವಿಷಯ ತಿಳಿದು ಎಎಸ್‍ಐ ಆತನನ್ನು ಹಿಡಿಯಲು ಮುಂದಾಗುತ್ತಿದ್ದಂತೆ ಅವರ ಮೇಲೆ ಕೈನಿಂದ ಹಲ್ಲೆ ಮಾಡಿದ್ದಾನೆ. ಆದರೂ ಪ್ರಾಣವನ್ನು ಲೆಕ್ಕಿಸದೆ ಪೊಲೀಸರು ಆತನನ್ನು ಹಿಡಿದು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಯಾವ ವೀಸಾದ್ಲಲಿ ಆತ ಭಾರತಕ್ಕೆ ಬಂದಿದ್ದಾನೆ. […]