ಮೋದಿ ವಿರುದ್ಧ ಬಿಲಾಲ್ ಹೇಳಿಕೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ

ನವದೆಹಲಿ,ಡಿ.17- ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಮಾನಹಾನಿಕಾರಕ ಹೇಳಿಕೆ ನೀಡಿದ್ದ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾಲ್ ಭುಟ್ಟೋ ವಿರುದ್ಧ ದೇಶಾದ್ಯಂತ ಇಂದು ಪ್ರತಿಭಟನೆಗಳು ನಡೆದಿದ್ದು, ಭಾರೀ ಆಕ್ರೋಗಳು ವ್ಯಕ್ತವಾಗಿವೆ. ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶ ಸೇರಿದಂತೆ ಎಲ್ಲಾ ರಾಜ್ಯಗಳ ರಾಜಧಾನಿ ಕೇಂದ್ರ ಹಾಗೂ ಪ್ರಮುಖ ನಗರಗಳಲ್ಲಿ ಪ್ರತಿಭಟನೆಗಳು ವರದಿಯಾಗಿವೆ. ಮಹಾರಾಷ್ಟದ ಪುಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್ಸ ಬವಾಂಕುಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಮುಂಬೈನಲ್ಲೂ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪಾಕಿಸ್ತಾನ ಮತ್ತು ಅಲ್ಲಿನ ವಿದೇಶಾಂಗ […]

ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ವಿರುದ್ಧ ಬಿಎಸ್ವೈ ಕಿಡಿ

ಬೆಂಗಳೂರು, ಡಿ.17- ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಕುರಿತಾಗಿ ಮಾಡಿರುವ ಟೀಕೆಯು ಅವರ ಕೀಳು ಮನಸ್ಥಿತಿಯನ್ನು ಬಯಲು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪಾಕಿಸ್ತಾನದ ವಿದೇಶಾಂಗ ಸಚಿವರಾಗಿ ಅವರ ಹೇಳಿಕೆಯು ಪಾಕಿಸ್ತಾನ ಸರ್ಕಾರದ ನೀಚ ಮನೋಸ್ಥಿತಿಯನ್ನು ಪ್ರತಿಬಿಂಬಿಸಿದೆ. ಇಡೀ ವಿಶ್ವದಲ್ಲಿಯೇ ಶಾಂತಿ ನೆಲೆಸು ವಂತಾಗಲು ಭಾರತದ ಪ್ರಧಾನಿಯವರು ನೇತೃತ್ವ ವಹಿಸಬೇಕೆಂದು ವಿಶ್ವದ ಎಲ್ಲಾ ಪ್ರಮುಖ ದೇಶಗಳು […]