ವಿಧಿ ವಿಜ್ಞಾನ ವಿವಿಗೆ ನಾಳೆ ಶಂಕುಸ್ಥಾಪನೆ

ಬೆಂಗಳೂರು,ಜ.27- ರಾಜ್ಯದಲ್ಲಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವ ಪ್ರಮಾಣ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ವಿಧಿವಿಜ್ಞಾನ ವಿಶ್ವ ವಿದ್ಯಾಲಯ ಸ್ಥಾಪನೆಗೆ ನಾಳೆ ಶಂಕುಸ್ಥಾಪನೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಾಳೆ ಧಾರವಾಡದ ಕೃಷಿ ವಿಶ್ವ ವಿದ್ಯಾಲಯದ ಆವರಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ವಿಧಿ ವಿಜ್ಞಾನ ವಿಶ್ವ ವಿದ್ಯಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದು, ಅಪರಾಧ ಪತ್ತೆ ಪ್ರಕರಣದ ತನಿಖೆಗೆ ಸಹಾಯಕವಾಗುವ ನಿಟ್ಟಿನಲ್ಲಿ ಇದು ಪ್ರಮುಖ ಮೈಲಿಗಲ್ಲು ಆಗಲಿದೆ ಎಂದು ತಿಳಿಸಿದ್ದಾರೆ. ಅಪರಾಧ […]