ಎಸ್‍ಸಿ ಒಳಮೀಸಲಾತಿ ಜಾರಿಗೆ ಸಂಪುಟ ಉಪಸಮಿತಿ ರಚನೆ

ಬೆಂಗಳೂರು,ಡಿ.13- ಪರಿಶಿಷ್ಟ ಜಾತಿಗಳ ವರ್ಗೀಕರಣ(ಒಳಮೀಸಲಾತಿ) ಜಾರಿ ಮಾಡುವ ಕುರಿತು ರಾಜ್ಯ ಸರ್ಕಾರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸಮಿತಿಗೆ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷರಾದರೆ ಸಚಿವರಾದ ಗೋವಿಂದ ಎಂ.ಕಾರಜೋಳ, ಎಸ್.ಅಂಗಾರ, ಪ್ರಭು ಚವ್ಹಾಣ್ ಹಾಗೂ ಡಾ.ಕೆ.ಸುಧಾಕರ್ ಅವರು ಸದಸ್ಯರಾಗಿದ್ದಾರೆ. ಈ ಸಮಿತಿಯು ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಸಂಬಂಧ ಪರಿಶೀಲಿಸಿ ಸರ್ಕಾರಕ್ಕೆ ಸೂಕ್ತ ಶಿಫಾರಸ್ಸುಗಳನ್ನು ಮಾಡಬೇಕೆಂದು ಅಧಿಸೂಚನೆಯಲ್ಲಿ ಹೊರಡಿಸಲಾಗಿದೆ. ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನ ಮಾಡಬೇಕೆಂದು ರಾಜ್ಯಾದ್ಯಂತ ಪರಿಶಿಷ್ಟ […]