ರಷ್ಯಾ- ಉಕ್ರೇನ್ ವಾರ್ : ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡರು

ಬೆಂಗಳೂರು,ಫೆ.28-ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಹಾಗೂ ಭಾರತೀಯರನ್ನು ಆದಷ್ಟು ಬೇಗ ಸುರಕ್ಷಿತವಾಗಿ ಕರೆತರಲು ವಿದೇಶಾಂಗ ಸಚಿವಾಲಯಕ್ಕೆ ಸೂಚನೆ ನೀಡಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಪ್ರಧಾನಿ ಅವರಿಗೆ ಪತ್ರ ಬರೆದಿರುವ ಗೌಡರು, ಯುದ್ಧ ನಡೆಯುತ್ತಿರುವ ಉಕ್ರೇನಲ್ಲಿ ಸಿಲುಕಿರುವ ಭಾರತೀಯರ ಯೋಗ ಕ್ಷೇಮಕ್ಕೆ ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ಕೋರಿದ್ದಾರೆ.ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಕಷ್ಟಕರವಾದ ಪರಿಸ್ಥಿತಿ ಉಕ್ರೇನಲ್ಲಿ ಉಂಟಾಗಿದೆ. ಆದರೂ ಭಾರತೀಯ ನಾಗರಿಕರನ್ನು ತಾಯ್ನಾಡಿಗೆ ಕರೆತರಲಾಗುತ್ತದೆ ಎಂಬ […]