ಬಿಜೆಪಿ ಸೇರಿದ ಕುಸ್ತಿಪಟು ದಿ ಗ್ರೇಟ್ ಖಲಿ

ನವದೆಹಲಿ,ಫೆ.10- ಅಂತಾರಾಷ್ಟ್ರೀಯ ವೃತ್ತಿಪರ ಕುಸ್ತಿಪಟು ಖಾಲಿ ಎಂದೇ ಗುರುತಿಸಲ್ಪಡುವ ದಿಲೀಪ್ ಸಿಂಗ್ ರಾಣಾ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸದಸ್ಯತ್ವ ಸ್ವೀಕರಿಸಿದ ಅವರು, ಬಿಜೆಪಿ ಸೇರ್ಪಡೆಯಾಗುತ್ತಿರುವುದಕ್ಕೆ ತುಂಬ ಸಂತೋಷವಾಗುತ್ತಿದೆ. ದೇಶಕ್ಕಾಗಿ ಕೆಲಸ ಮಾಡಲು ನರೇಂದ್ರ ಮೋದಿ ಅವರು ಸೂಕ್ತ ಪ್ರಧಾನಿ ನನಗೆ ಅನಿಸುತ್ತದೆ. ಹಾಗಾಗಿ ಸರ್ಕಾರದ ಅಭಿವೃದ್ದಿ ಕಾರ್ಯಗಳ ಜೊತೆ ಕೈ ಜೋಡಿಸಲು ನಾನು ಬಿಜೆಪಿ ಸೇರಿದ್ದೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ.