ಕಬ್ಬಿನ ದರ ನಿರ್ಧರಿಸದಿದ್ದರೆ ಸುವರ್ಣಸೌಧಕ್ಕೆ ಮುತ್ತಿಗೆ

ಬೆಂಗಳೂರು,ಡಿ.18- ಕಬ್ಬಿನ ಎಫ್ಆರ್ಪಿ ದರ ಏರಿಕೆ, ಕಟಾವ ಕೂಲಿ ಸಾಗಾಣಿಕೆ ವೆಚ್ಚ ಕಡಿತ ಮಾಡುವ ಬಗ್ಗೆ ಮುಖ್ಯಮಂತ್ರಿಯವರು ಒಪ್ಪಿಕೊಂಡಿದ್ದಾರೆ. ಅದರಂತೆ 23ರ ವಿಶ್ವ ರೈತ ದಿನದ ಆಚರಣೆಯ ಒಳಗೆ ತೀರ್ಮಾನ ಕೈಗೊಳ್ಳಬೇಕು, ನಿರ್ಲಕ್ಷ್ಯ ಮಾಡಿದರೆ 26ರಂದು ಸುವರ್ಣಸೌಧಕ್ಕೆ ಮುತ್ತಿಗೆ ಆಗಬೇಕಾಗುತ್ತದೆ ಎಂದು ಕರ್ನಾಟಕ ರೈತ ಸಂಘಟನೆಗಳ ಒಕ್ಕೂಟ ಎಚ್ಚರಿಸಿದೆ. ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ಕರ್ನಾಟಕ ರೈತ ಸಂಘಟನೆಗಳ ಒಕ್ಕೂಟ ಹಾಗೂ ಮೈಸೂರಿನ ರಂಗಸಮುದ್ರ ಗ್ರಾಮ ಘಟಕ ಫ್ರೀಡಂ ಪಾರ್ಕ್ನಲ್ಲಿ ನಡೆಸುತ್ತಿರುವ 27ನೇ ದಿನದ ಧರಣಿಯಲ್ಲಿ […]