ವಿಧಿ ವಿಜ್ಞಾನ ವಿವಿಗೆ ನಾಳೆ ಶಂಕುಸ್ಥಾಪನೆ

ಬೆಂಗಳೂರು,ಜ.27- ರಾಜ್ಯದಲ್ಲಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವ ಪ್ರಮಾಣ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ವಿಧಿವಿಜ್ಞಾನ ವಿಶ್ವ ವಿದ್ಯಾಲಯ ಸ್ಥಾಪನೆಗೆ ನಾಳೆ ಶಂಕುಸ್ಥಾಪನೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಾಳೆ ಧಾರವಾಡದ ಕೃಷಿ ವಿಶ್ವ ವಿದ್ಯಾಲಯದ ಆವರಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ವಿಧಿ ವಿಜ್ಞಾನ ವಿಶ್ವ ವಿದ್ಯಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದು, ಅಪರಾಧ ಪತ್ತೆ ಪ್ರಕರಣದ ತನಿಖೆಗೆ ಸಹಾಯಕವಾಗುವ ನಿಟ್ಟಿನಲ್ಲಿ ಇದು ಪ್ರಮುಖ ಮೈಲಿಗಲ್ಲು ಆಗಲಿದೆ ಎಂದು ತಿಳಿಸಿದ್ದಾರೆ. ಅಪರಾಧ […]

ವಿಧಾನಸೌಧ ಎದುರು ಬಸವಣ್ಣ, ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ

ಬೆಂಗಳೂರು,ಜ.13- ಆಡಳಿತ ಶಕ್ತಿಕೇಂದ್ರ ವಿಧಾನಸೌಧದ ಮುಂಭಾಗದಲ್ಲಿ ಬಹುನಿರೀಕ್ಷಿತ ನಾಡಪ್ರಭು ಕೆಂಪೇಗೌಡ ಹಾಗೂ ಕಾಯಕಯೋಗಿ ಬಸವಣ್ಣನವರ ಪ್ರತಿಮೆ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಲಾಯಿತು. ರಾಷ್ಟ್ರಪಿತ ಮಹಾತ್ಮ ಗಾಂಯವರ ಪ್ರತಿಮೆ ಪಕ್ಕ ಸುಮಾರು 8 ಕೋಟಿ ವೆಚ್ಚದಲ್ಲಿ ಸರ್ಕಾರ ಈ ಪ್ರತಿಮೆಗಳನ್ನು ನಿರ್ಮಾಣ ಮಾಡುತ್ತಿದ್ದು, ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಪ್ರತಿಮೆಗಳನ್ನು ಉದ್ಘಾಟಿಸುವ ಲೆಕ್ಕಾಚಾರದಲ್ಲಿ ಸರ್ಕಾರವಿದೆ. ಕಳೆದ ತಿಂಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಾಡಪ್ರಭು ಕೆಂಪೇಗೌಡರ 108 ಅಡಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರಮೋದಿ ಅವರು ಉದ್ಘಾಟಿಸಿದ್ದರು. […]

ರಾಜೀವ್ ಗಾಂಧಿ ಫೌಂಡೇಶನ್‍ಗೆ ವಿದೇಶಿ ಕೊಡುಗೆ ರದ್ದು

ನವದೆಹಲಿ.ಅ,23- ಕಾನೂನು ನಿಯಮ ಉಲ್ಲಂಘನೆ ಆರೋಪದ ಮೇಲೆ ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಸರ್ಕಾರೇತರ ಸಂಸ್ಥೆ ರಾಜೀವ್ ಗಾಂಧಿ ಫೌಂಡೇಷನ್ (ಆರ್‍ಜಿಎಫ್) ನ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‍ಸಿಆರ್‍ಎ) ಪರವಾನಗಿ ಯನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿದೆ. ಕಳೆದ 2020ರಲ್ಲಿ ಗೃಹ ಸಚಿವಾಲಯವು ರಚಿಸಿದ ಅಂತರ-ಸಚಿವಾಲಯ ಸಮಿತಿಯು ನಡೆಸಿದ ತನಿಖೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿ ಕಾರಿಗಳು ತಿಳಿಸಿದ್ದಾರೆ. ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರ್‍ಜಿಎಫ್‍ನ ಅಧ್ಯಕ್ಷರಾಗಿದ್ದರೆ, ಇತರ ಟ್ರಸ್ಟಿಗಳಲ್ಲಿ ಮಾಜಿ ಪ್ರಧಾನಿ ಮನಮೋಹನ್ […]

ಅಯೋಧ್ಯೆಯ ಮಸೀದಿ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹ

ಲಖ್ನೋ,ಆ.21- ರಾಮಜನ್ಮಭೂಮಿ ಅಯೋಧ್ಯೆಯ ಧನೀಪುರದಲ್ಲಿ ಮಸೀದಿ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸಲಾಗಿದೆ ಎಂದು ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್(ಐಐಸಿಎಫ್) ತಿಳಿಸಿದೆ. 2019ರ ನವೆಂಬರ್ 9ರಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ದಶಕಗಳ ಅಯೋಧ್ಯಾ ರಾಮಜನ್ಮ ವಿವಾದವನ್ನು ಇತ್ಯಥರ್ಗೊಳಿಸಿದೆ. ತೀರ್ಪಿನ ಭಾಗವಾಗಿ ದನ್ನಿಪುರದಲ್ಲಿ ಐದು ಎಕರೆ ಜಾಗ ನೀಡಲಾಗಿದೆ. ಅದರಲ್ಲಿ ಮೊದಲು ಆಸ್ಪತ್ರೆ ನಿರ್ಮಿಸಲಾಗಿದ್ದು, ಹೊರರೋಗಿಗಳ ವಿಭಾಗವನ್ನು ಶುರು ಮಾಡಲಾಗಿದೆ. ಮುಂದುವರೆದು ಮಸೀದಿ ಪ್ರಾರ್ಥನಾ ಮಂದಿರ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಅದರಲ್ಲಿ ಗ್ರಂಥಾಲಯ, ಸಾಮೂಹಿಕ ಅಡುಗೆ ಕೋಣೆ, ಸಂಶೋಧನಾ ಕೇಂದ್ರಗಳಿವೆ. […]