ಆಟೋದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟಾ ಮಾಡುತ್ತಿದ್ದ ಖದೀಮರು ಅಂದರ್

ಬೆಂಗಳೂರು, ಫೆ.14- ಆಟೋದಲ್ಲಿ ಮಾದಕ ವಸ್ತು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಉಪ್ಪಾರಪೇಟೆ ಠಾಣೆ ಪೊಲೀಸರು ಕಾರ್ಯಾಚರಣೆ ಕೈಗೊಂಡು ನಾಲ್ವರನ್ನು ಬಂಧಿಸಿ 43 ಕೆಜಿ ಗಾಂಜಾ, ಆಟೋರಿಕ್ಷಾ ಮತ್ತು ಬೈಕ್ ವಶಪಡಿಸಿಕೊಂಡಿದ್ದಾರೆ. ಫೆ.10ರಂದು ಸಂಜೆ 6.30ರ ಸುಮಾರಿನಲ್ಲಿ ಉಪ್ಪಾರಪೇಟೆ ವ್ಯಾಪ್ತಿಯಲ್ಲಿ ಇಬ್ಬರು ಆಟೋರಿಕ್ಷಾದಲ್ಲಿ ಮಾದಕ ವಸ್ತು ಗಾಂಜಾ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ಇನ್ಸ್‍ಪೆಕ್ಟರ್ ಶಿವಸ್ವಾಮಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಸ್ಥಳಕ್ಕೆ ತೆರಳಿ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿ […]