ಒಂದೇ ಕುಟುಂಬದ ನಾಲ್ವರ ಕಗ್ಗೊಲೆ, ಬೆಚ್ಚಿಬಿದ್ದ ಭಟ್ಕಳ

ಭಟ್ಕಳ, ಫೆ.25- ಆಸ್ತಿ ವಿವಾದದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದಲ್ಲಿ ನಡೆದಿದೆ. ಶಂಭುಭಟ್ (65), ಪತ್ನಿ ಮಹದೇವಿ ಭಟ್ (60), ಪುತ್ರ ರಾಜೀವ್ ಭಟ್ (34) ಹಾಗೂ ಪತ್ನಿ ಕುಸುಮಾ ಭಟ್ (30) ಕೊಲೆಯಾದ ದುರ್ದೈವಿಗಳು. ಕಳೆದ ರಾತ್ರಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸಂಬಂಧಿಕರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಕತ್ತಿಯಿಂದ ನಾಲ್ವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಕನ್ನಡಿಗ […]