ಬೆಂಗಳೂರಿಗರಿಗೆ ಕಾದಿದೆಯಾ ಬಿಗಿ ಕ್ರಮದ ಭಯ..? ನಾಳೆ ಮಹತ್ವದ ಕಾವಿಡ್ ಸಭೆ

ಬೆಂಗಳೂರು,ಡಿ.25- ರಾಜ್ಯದಲ್ಲಿ ನಾಲ್ಕನೇ ಕೋವಿಡ್ ಅಲೆ ಕಾಣಿಸಿಕೊಳ್ಳಬಹುದೆಂಬ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ನಾಳೆ ಇಬ್ಬರು ಸಚಿವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆ ಇದೆ. ರಾಜ್ಯ ವಿಪತ್ತು ನಿರ್ವಹಣಾ ಸಮಿತಿ ಉಪಾಧ್ಯಕ್ಷರೂ ಆಗಿರುವ ಸಚಿವ ಆರ್.ಅಶೋಕ್, ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಹಾಗೂ ಎರಡು ಇಲಾಖೆಗಳ ಅಧಿಕಾರಿಗಳ ಜೊತೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಪ್ರಮುಖವಾಗಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸುವುದು, ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ […]