ಉಚಿತ ವಿದ್ಯುತ್ ಕಾಂಗ್ರೆಸ್‍ನ ಸುಳ್ಳು ಡಂಗೂರ : ಸುನೀಲ್‍ಕುಮಾರ್

ಬೆಂಗಳೂರು,ಜ.13- ಅಧಿಕಾರದಲ್ಲಿದ್ದಾಗ ರೈತರ ಕೃಷಿ ಪಂಪ್ ಸೆಟ್‍ಗಳಿಗೆ ಸಂಪರ್ಕ ನೀಡದೇ ಸತಾಯಿಸಿದವರು ಈಗ 200 ಯುನಿಟ್‍ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಡಂಗೂರ ಸಾರುತ್ತಿರುವುದು ಈ ಶತಮಾನದ ಅತಿದೊಡ್ಡ ಸುಳ್ಳು ಎಂದು ಇಂಧನ ಹಾಗೂ ಕನ್ನಡ ಸಂಸ್ಕ್ರತಿ ಸಚಿವ ವಿ.ಸುನೀಲ್‍ಕುಮಾರ್ ವ್ಯಂಗ್ಯವಾಡಿದ್ದಾರೆ. ತಾವು ಮುಖ್ಯಮಂತ್ರಿ ಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತದ ಹೇಳಿಕೆಯಲ್ಲ. ಎಸ್ಕಾಂಗಳನ್ನು ಖಾಸಗಿಕರಣಗೊಳಿಸುವುದೇ […]