ಪತ್ರಿಕಾ ಸ್ವಾತಂತ್ರ್ಯವನ್ನು ಬೆಂಬಲಿಸುತ್ತೆವೆ : ಅಮೆರಿಕ

ನವದೆಹಲಿ,ಜ.26- ಗುಜರಾತ್ ಗಲಭೆ ಘಟನೆ ಸಂಬಂಧ ಬಿಬಿಸಿ ಬಿಡುಗಡೆ ಮಾಡಿದ ಸಾಕ್ಷ್ಯಚಿತ್ರದ ಪ್ರಸಾರವನ್ನು ಭಾರತ ಸರ್ಕಾರ ನಿಷೇಧಿಸಿದ ನಿರ್ಧಾರದ ಬಗ್ಗೆ ಅಮೆರಿಕ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದೆ. ಅಮೆರಿಕದ ವಿದೇಶಾಂಗ ಸಚಿವಾಲಯದ ಪತ್ರಿಕಾಗೋಷ್ಠಿಯಲ್ಲಿ ಪಾಕಿಸ್ತಾನಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದ ಸರ್ಕಾರದ ವಕ್ತಾರ ನೆಡ್ ಪ್ರೈಸ್ ಅವರು, ಅಮೆರಿಕವು ಪ್ರಪಂಚದಾದ್ಯಂತ ಪತ್ರಿಕಾ ಸ್ವಾತಂತ್ರ್ಯವನ್ನು ಬೆಂಬಲಿಸುತ್ತದೆ. ಭಾರತವೂ ಒಳಗೊಂಡಂತೆ ವಿಶ್ವಾದ್ಯಂತ ಪತ್ರಿಕಾ ಸ್ವಾತಂತ್ರ್ಯ ಇರಬೇಕೆಂದು ಬಯಸುತ್ತೇವೆ. ಭಾರತ ಸೇರಿ ಇಡೀ ವಿಶ್ವದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದಂತಹ ಪ್ರಜಾಪ್ರಭುತ್ವದ ತತ್ವಗಳ ಮಹತ್ವವನ್ನು ಪ್ರತಿಪಾದಿಸಲು ಇದು […]