ಕಾಂಗ್ರೆಸ್ ಬೃಹತ್ ಸ್ವಾತಂತ್ರ್ಯ ನಡಿಗೆಗೆ ಹರಿದುಬಂದ ಜನಸಾಗರ

ಬೆಂಗಳೂರು, ಆ.15- ಸ್ವಾತಂತ್ರ್ಯ ಮಹೋತ್ಸವದ 76ನೇ ವರ್ಷಾಚರಣೆಯ ಅಂಗವಾಗಿ ಕಾಂಗ್ರೆಸ್ ನಗರದಲ್ಲಿಂದು ಬೃಹತ್ ಸ್ವತಂತ್ರ್ಯ ನಡಿಗೆಯನ್ನು ಆಯೋಜಿಸಿತ್ತು. ಮಧ್ಯಾಹ್ನ 2 ಗಂಟೆಯಿಂದ ಮೆಜೆಸ್ಟಿಕ್‍ನ ಸಂಗೋಳ್ಳಿ ರಾಯಣ್ಣ ಪ್ರತಿಮೆಯಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೂ ಏಳುವರೆ ಕಿಲೋ ಮೀಟರ್ ದೂರ ಪಾದಯಾತ್ರೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಕಾಂಗ್ರೆಸ್ ವತಿಯಿಂದ ಪಾದಯಾತ್ರೆ ಆಯೋಜಿಸಲಾಗಿದ್ದರು, ಜಾತ್ಯತೀತ ಹಾಗೂ ಪಕ್ಷಾತೀತವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಕರೆ ನೀಡಲಾಗಿತ್ತು. ಅದರ ಪ್ರಯುಕ್ತ ಲಕ್ಷಾಂತರ ಮಂದಿ ರ್ಯಾಲಿಯಲ್ಲಿ ಹೆಜ್ಜೆ ಹಾಕಿದರು. ಆನ್‍ಲೈನ್‍ನಲ್ಲಿ […]